Publish Date: Fri, 09 Oct 2020 (09:12 IST)
Updated Date: Fri, 09 Oct 2020 (09:14 IST)
ದುಬೈ: ಐಪಿಎಲ್ 13 ರ ಇಂದಿನ ಪಂದ್ಯದಲ್ಲಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯವಾಡಲಿದೆ.
ಶ್ರೇಯಸ್ ಐಯರ್ ನೇತೃತ್ವದ ಡೆಲ್ಲಿ ಪಡೆ ಈಗಾಗಲೇ ಅಂಕಪಟ್ಟಿಯಲ್ಲಿ ಐದು ಪಂದ್ಯಗಳ ಪೈಕಿ ನಾಲ್ಕರನ್ನು ಗೆದ್ದು ದ್ವಿತೀಯ ಸ್ಥಾನದಲ್ಲಿದೆ. ಅತ್ತ ರಾಜಸ್ಥಾನ್ ಸತತ ಬ್ಯಾಟಿಂಗ್ ವೈಫಲ್ಯದಿಂದಾಗಿ ಕಳೆಗುಂದಿದೆ. ಸದ್ಯಕ್ಕೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ರಾಜಸ್ಥಾನ್ ಗೆ ಗೆಲುವು ಅನಿವಾರ್ಯ ಎಂಬ ಸ್ಥಿತಿಯಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಡೆಲ್ಲಿಗೆ ಸೆಡ್ಡು ಹೊಡೆದರೂ ಅಚ್ಚರಿಯಿಲ್ಲ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.