Publish Date: Mon, 05 Oct 2020 (11:30 IST)
Updated Date: Mon, 05 Oct 2020 (11:32 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯವಾಡಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಮಾಡಲಿದ್ದಾರೆ.
ಇಂದು ಕೊಹ್ಲಿ 10 ರನ್ ಗಳಿಸಿದರೆ ಟಿ20 ಕ್ರಿಕೆಟ್ ನಲ್ಲಿ 9000 ರನ್ ಗಳಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ದಾಖಲೆ ಮಾಡಲಿದ್ದಾರೆ. ಐಪಿಎಲ್ ನಲ್ಲಿ ಗರಿಷ್ಠ ರನ್ ದಾಖಲೆ ಹೊಂದಿರುವ ಕೊಹ್ಲಿ ಈಗ ಟಿ20 ಕ್ರಿಕೆಟ್ ನಲ್ಲಿ ಭಾರತೀಯ ಕ್ರಿಕೆಟಿಗರು ಯಾರೂ ಮಾಡದ ದಾಖಲೆ ಮಾಡಲಿದ್ದಾರೆ. ಕಳೆದ ಪಂದ್ಯದಲ್ಲಿ ಫಾರ್ಮ್ ಗೆ ಮರಳಿರುವ ಕೊಹ್ಲಿ ಈ ಪಂದ್ಯದಲ್ಲಿ ಈ ದಾಖಲೆ ಮಾಡುವುದು ಖಚಿತ ಎನ್ನಬಹುದು.