Select Your Language

Notifications

webdunia
webdunia
webdunia
webdunia

ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಮೇಲೆ ಬೆಟ್ಟಿಂಗ್ ಆರೋಪ

ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಮೇಲೆ ಬೆಟ್ಟಿಂಗ್ ಆರೋಪ
ನವದೆಹಲಿ , ಸೋಮವಾರ, 14 ಏಪ್ರಿಲ್ 2014 (10:31 IST)
ಐಪಿಎಲ್ ಫಿಕ್ಸಿಂಗ್ ಬೆಟ್ಟಿಂಗ್‌ಲ್ಲಿ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಸಹ ಭಾಗಿಯಾಗಿದ್ದು, ಈ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಬಿಹಾರ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಆದಿತ್ಯ ವರ್ಮಾ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.
PTI

ಐಪಿಎಲ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ ಮೆಟ್ಟಿಲೇರಿರುವ ವರ್ಮಾ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಕೂಡಾ ಬೆಟ್ಟಿಂಗ್ ಹಗರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಕೆಲವರು ಜೈಲು ಪಾಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಹೊಂದಿ ತನಿಖೆ ಎದುರಿಸುತ್ತಿದ್ದಾರೆ. ಅಲ್ಲದೆ ಕೆಲವು ಅಧಿಕಾರಿಗಳು ಫಿಕ್ಸಿಂಗ್‌ಲ್ಲಿ ಭಾಗಿಯಾದವರ ಜೊತೆ ನಿಕಟ ಸಂಪರ್ಕದಲ್ಲಿದ್ದ ಬಗ್ಗೆ ಸಹ ಮಾಹಿತಿ ಕೂಡಾ ದೊರೆತಿದೆ ಎನ್ನಲಾಗಿದೆ.

ಈ ನಡುವೆ ವರ್ಮಾ ಅವರು ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಕುರಿತು ಆರೋಪ ಮಾಡಿ ಸಿಬಿಐ ತನಿಖೆಗೆ ಆಗ್ರಹಿಸಿರುವುದು ಕುತೂಹಲ ಮೂಡಿಸಿದೆ.

Share this Story:

ವೆಬ್ದುನಿಯಾವನ್ನು ಓದಿ

ಸುದ್ದಿಗಳು ಸ್ಯಾಂಡಲ್ ವುಡ್ ಕ್ರಿಕೆಟ್‌ ಸುದ್ದಿ ಜ್ಯೋತಿಷ್ಯ ಜನಪ್ರಿಯ..

Follow Webdunia kannada