ಜೈಪುರ: ಮುಂಬರುವ ಐಪಿಎಲ್‌ಗೆ ಎಲ್ಲ ತಂಡಗಳೂ ಭರ್ಜರಿ ತಯಾರಿ ನಡೆಸುತ್ತಿವೆ. ರಾಜಸ್ಥಾನ ರಾಯಲ್ಸ್ ನಾಯಕರಾಗಿದ್ದ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್‌ಗೆ ಬಿಟ್ಟುಕೊಟ್ಟ ಬೆನ್ನಲ್ಲೇ ಮತ್ತೊಂದು ದೊಡ್ಡ ನಿರ್ಧಾರವನ್ನು ತಂಡ ಕೈಗೊಂಡಿದೆ.
2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ತಂಡದ ಮುಖ್ಯ ಕೋಚ್ ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕಾರ ಅವರನ್ನು ನೇಮಕ ಮಾಡಿದೆ. ಕಳೆದ ಆವೃತ್ತಿಯಲ್ಲಿ ತಂಡಕ್ಕೆ ಮಾರ್ಗದರ್ಶನ ನೀಡಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಕಳೆದ ಆಗಸ್ಟ್‌ನಲ್ಲಿ ಹುದ್ದೆಗೆ ಗುಡ್‌ಬೈ ಹೇಳಿದ್ದಾರೆ.
2021 ರಿಂದ 24ರ ಅವಧಿಯಲ್ಲಿ ತಂಡದ ಹೆಡ್ ಕೋಚ್ ಆಗಿ ಜವಾಬ್ದಾರಿ ನಿಭಾಯಿಸಿದ್ದ ಕುಮಾರ ಸಂಗಕ್ಕಾರ ಅವರನ್ನು ಮರಳಿ ಅದೇ ಸ್ಥಾನ ಪಡೆದಿದ್ದಾರೆ. ಸಂಗಕ್ಕಾರ ನೇಮಕಾತಿ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜಸ್ಥಾನ ರಾಯಲ್ಸ್ ಕ್ರಿಕೆಟ್ ನಿರ್ದೇಶಕರಾಗಿರುವ ಕುಮಾರ್ ಸಂಗಕ್ಕಾರ ಐಪಿಎಲ್ 2026 ರಲ್ಲಿ ರಾಜಸ್ಥಾನ ರಾಯಲ್ಸ್‌ನ ಮುಖ್ಯ ತರಬೇತುದಾರರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ತಿಳಿಸಿದೆ.
2025ರಲ್ಲಿ ರಾಜಸ್ಥಾನ ತಂಡ ಆಡಿರುವ 14 ಪಂದ್ಯಗಳಲ್ಲಿ 4ರಲ್ಲಿ ಮಾತ್ರ ಗೆದ್ದು 9ನೇ ಸ್ಥಾನದಲ್ಲಿ ಟೂರ್ನಿಯನ್ನು ಕೊನೆಗೊಳಿಸುತ್ತು. ಈ ಹಿನ್ನೆಲೆಯಲ್ಲಿ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದೆ. ಅದರಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಸಿಎಸ್‌ಕೆಗೆ ಬಿಟ್ಟುಕೊಟ್ಟು ರವೀಂದ್ರ ಜಡೇಜ ಮತ್ತು ಸ್ಯಾಮ್ ಕರನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದು ಸೇರಿದೆ.