ಚೆನ್ನೈ: ಐಪಿಎಲ್ 14 ಕ್ಕೆ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವರ್ಷದ ಆಟಗಾರರಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ದುಬಾರಿ ಆಟಗಾರರಾಗಿ ಹೊರಹೊಮ್ಮಬಹುದು ಎಂದು ಮಾಜಿ ವೇಗಿ ಆಶಿಶ್ ನೆಹ್ರಾ ಅಭಿಪ್ರಾಯಪಟ್ಟಿದ್ದಾರೆ.
ಶಕೀಬ್ ಮೂಲ ಬೆಲೆ 2 ಕೋಟಿ ರೂ. ಅವರು ಬ್ಯಾಟ್ ಮತ್ತು ಬೌಲಿಂಗ್ ಎರಡರಲ್ಲೂ ಉಪಯುಕ್ತ ಕಾಣಿಕೆ ಸಲ್ಲಿಸುತ್ತಾರೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳಿಗೂ ಅವರು ಬೇಡಿಕೆಯ ಆಟಗಾರರಾಗಲಿದ್ದಾರೆ. ಹೀಗಾಗಿ ಅವರನ್ನು ದುಬಾರಿ ಬೆಲೆ ಕೊಟ್ಟು ಖರೀದಿ ಮಾಡಬಹುದು ಎಂದು ನೆಹ್ರಾ ಅಭಿಪ್ರಾಯಪಟ್ಟಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!