Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

Sampriya
ಶುಕ್ರವಾರ, 6 ಜೂನ್ 2025 (14:05 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಮಂದಿ ಆರ್‌ಸಿಬಿ ಅಭಿಮಾನಿಗಳ ಕುಟುಂಬಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಗ್ರಹಿಸಿದ್ದಾರೆ. 

ಬೆಂಗಳೂರಿನಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಮೃತಪಟ್ಟಿದ್ದು ನೋವು ತಂದಿದೆ. ಅವರ ಕುಟುಂಬದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಆರ್‌ಸಿಬಿ ತಂಡದ ಮ್ಯಾನೇಜ್‌ಮೆಂಟ್ ವತಿಯಿಂದ ದೊಡ್ಡಮೊತ್ತದ ಪರಿಹಾರ ನೀಡಬೇಕು ಎಂದು ಬೆಳಗಾವಿಯಲ್ಲಿ ಒತ್ತಾಯಿಸಿದರು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ಜನರ ದಾರಿ ತಪ್ಪಿಸುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ಹಿರಿಯರು ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ. ರಾಜಕಾರಣಕ್ಕಿಂತ ಈ ಘಟನೆ ಏಕೆ ನಡೆಯಿತು ಎಂಬುದು ತಿಳಿಯಬೇಕು ಎಂದು ಹೇಳಿದರು.

ಐಪಿಎಲ್ ಕಪ್ ಗೆದ್ದ ಆರ್‌ಸಿಬಿ ತಂಡಕ್ಕೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟರೆ, 50ಕ್ಕೂ ಅಧಿಕ ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಸಂಬಂಧ ಬೆಂಗಳೂರು ಪೊಲೀಸ್‌ ಕಮಿಷನರ್‌ ದಯಾನಂದ್‌ ಸೇರಿದಂತೆ ಹಲವರ ತಲೆದಂಡವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಮುಂದಿನ ಸುದ್ದಿ
Show comments