ಐಪಿಎಲ್‌ ಕಪ್‌ ಗೆದ್ದ ಆರ್‌ಸಿಬಿ ತಂಡವನ್ನು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡ ಡಿಸಿಎಂ ಡಿಕೆಶಿ

Sampriya
ಬುಧವಾರ, 4 ಜೂನ್ 2025 (14:36 IST)
ಬೆಂಗಳೂರು: ಐಪಿಎಲ್‌ ಕಪ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ರಾಜ್ಯಕ್ಕೆ ಬಂದಿಳಿದಿದೆ. ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ತಂಡವನ್ನು ಅದ್ದೂರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬರಮಾಡಿಕೊಂಡರು.

ಇದಕ್ಕೂ ಮುನ್ನ ಮಾತನಾಡಿದ್ದ ಡಿಕೆಶಿ, ಆರ್‌ಸಿಬಿ  ಹುಡುಗರು ನಮ್ಮ ಕರ್ನಾಟಕಕ್ಕೆ ಗೌರವ ಹಾಗೂ ಹೆಮ್ಮೆ ತಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್‌ ಮಣಿಸಿ ಆರ್‌ಸಿಬಿ ಮೊದಲ ಬಾರಿ ಕಪ್‌ ಗೆದ್ದಿತ್ತು. 18 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಬೆಂಗಳೂರು ತಂಡದ ಮೊದಲ ಬಾರಿ ಕಪ್‌ ಗೆದ್ದಿದೆ. 

ಆರ್‌ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್‌ಗೂ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ ಎಂದು ಡಿಕೆಶಿ ಹೇಳಿದರು. 

ಮೆರವಣಿಗೆ, ವಿಜಯೋತ್ಸವ ಅನುಮತಿ ಕುರಿತು ಗೃಹ ಸಚಿವರು, ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್‌ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments