Publish Date: Wed, 22 May 2024 (19:19 IST)
Updated Date: Wed, 22 May 2024 (19:27 IST)
ಅಹಮದಾಬಾದ್: ಇಲ್ಲಿನ ಮೊಟೇರಾ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಫಫ್ ಡುಪ್ಲೆಸಿ ಬಳಗವು ಮೊದಲ ಬ್ಯಾಟಿಂಗ್ ನಡೆಸಲಿದೆ.
ಸತತ ಆರು ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ ಈ ಪಂದ್ಯದಲ್ಲೂ ಗೆಲುವು ಸಾಧಿಸಿ ಎರಡನೇ ಕ್ವಾಲಿಫೈಯರ್‌ಗೆ ಲಗ್ಗೆ ಹಾಕಲು ಎದುರು ನೋಡುತ್ತಿದೆ.
ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಸಿಎಸ್‌ಕೆ ವಿರುದ್ಧದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ರಾಜಸ್ಥಾನ ವಿರುದ್ಧ ಕಣಕ್ಕಿಳಿಯಲಿದೆ.