ಐಪಿಎಲ್‌ನಲ್ಲಿ ಇಂದು ಹೈವೋಲ್ಟೇಜ್‌ ಕದನ: ಐದು ಬಾರಿ ಕಿರೀಟ ಗೆದ್ದ ಚೆನ್ನೈ- ಮುಂಬೈ ತಂಡಗಳ ಮುಖಾಮುಖಿ

Sampriya
ಭಾನುವಾರ, 23 ಮಾರ್ಚ್ 2025 (11:26 IST)
Photo Courtesy X
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಶುಭಾರಂಭ ಮಾಡಿದೆ. ಎರಡನೇ ದಿನವಾದ ಇಂದು ರಾತ್ರಿ ನಡೆಯುವ ಪಂದ್ಯದಲ್ಲಿ ಐಪಿಎಲ್‌ನಲ್ಲಿ ತಲಾ ಐದು ಬಾರಿ ಕಿರೀಟ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು  ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಲಿವೆ.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. 37 ವರ್ಷದ ರೋಹಿತ್‌ ಶರ್ಮಾ ಅವರು ಕಳೆದ ಆವೃತ್ತಿ ತನಕ ಮುಂಬೈ ತಂಡವನ್ನು ಮುನ್ನಡೆಸಿದ್ದು, ಈಗ ಬ್ಯಾಟರ್‌ ಆಗಿ ಪಾತ್ರ ನಿರ್ವಹಿಸುವರು. 43 ವರ್ಷದ ಧೋನಿ ಅವರು ಹಿಂದಿನ ಆವೃತ್ತಿತನಕ ಚೆನ್ನೈ ತಂಡವನ್ನು ಮುನ್ನಡೆಸಿದ್ದು, ಈಗ ವಿಕೆಟ್‌ ಕೀಪರ್‌ ಮತ್ತು ಫಿನಿಷರ್‌ ಪಾತ್ರ ನಿರ್ವಹಿಸಲಿದ್ದಾರೆ.

ಚೆನ್ನೈ ತಂಡವನ್ನು ಯುವ ಆಟಗಾರ ಋತುರಾಜ್ ಗಾಯಕವಾಡ ಮುನ್ನಡೆಸುತ್ತಿದ್ದು, ಸ್ಪಿನ್ ವಿಭಾಗದ ಮೇಲೆ ಹೆಚ್ಚು ವಿಶ್ವಾಸ ಇಟ್ಟುಕೊಂಡಿದೆ. ರವೀಂದ್ರ ಜಡೇಜ ಅವರೊಂದಿಗೆ ಆಫ್‌ಸ್ಪಿನ್ ದಂತಕಥೆ ಆರ್. ಅಶ್ವಿನ್, ನೂರ್ ಅಹಮದ್,  ಕನ್ನಡಿಗ ಶ್ರೇಯಸ್ ಗೋಪಾಲ್  ಮತ್ತು ದೀಪಕ್ ಹೂಡಾ ತಂಡದಲ್ಲಿದ್ದಾರೆ. ಆಲ್‌ರೌಂಡರ್ ರಚಿನ್ ರವೀಂದ್ರ ಕೂಡ ಇವರಿಗೆ ಜೊತೆ ನೀಡುತ್ತಾರೆ.  ನಾಯಕ ಋತುರಾಜ್, ರಾಹುಲ್ ತ್ರಿಪಾಠಿ, ಡೆವೊನ್ ಕಾನ್ವೆ ಹಾಗೂ ಮಹೇಂದ್ರಸಿಂಗ್ ಧೋನಿ ಅವರು ಬ್ಯಾಟಿಂಗ್ ವಿಭಾಗದ ಶಕ್ತಿಯಾಗಿದ್ದಾರೆ.  

ಮುಂಬೈ ತಂಡಕ್ಕೆ ಪಂದ್ಯ ಆರಂಭಕ್ಕೂ ಮುನ್ನ ಆಘಾತ ಎದುರಾಗಿದೆ. ವೇಗಿ ಜಸ್‌ಪ್ರೀತ್ ಬೂಮ್ರಾ ಕಣಕ್ಕಿಳಿಯುವುದು ಖಚಿತವಾಗಿಲ್ಲ. ಮತ್ತೊಂದೆಡೆ ನಾಯಕ ಹಾರ್ದಿಕ್ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸುವರು. ಇದರಿಂದಾಗಿ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್, ದೀಪಕ್ ಚಾಹರ್ ಅವರ ಮೇಲೆ ಅವಲಂಬಿತವಾಗಬಹುದು. ತಂಡದ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದೆ. ಸೂರ್ಯ, ರೋಹಿತ್, ತಿಲಕ್ ವರ್ಮಾ, ರಿಯಾನ್ ರಿಕೆಲ್ಟನ್ ಅವರು ಅಬ್ಬರಿಸುವ ನಿರೀಕ್ಷೆ ಇದೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments