ದುಬೈ: ಐಪಿಎಲ್ 14 ರಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಗೆ ಇಂದು ರಾಜಸ್ಥಾನ್ ರಾಯಲ್ಸ್ ಕುಣಿಕೆ ಹಾಕಲು ರೆಡಿಯಾಗಿದೆ.
ಅಂಕ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿರುವ ಡೆಲ್ಲಿ ಕಳೆದ ಪಂದ್ಯದಲ್ಲೂ ಸರ್ವಾಂಗೀಣ ಪ್ರದರ್ಶನ ನೀಡಿತ್ತು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಬಲಿಷ್ಠವಾಗಿದೆ.
ಇತ್ತ ರಾಜಸ್ಥಾನ್ ಕೂಡಾ ಕಡಿಮೆಯೇನಲ್ಲ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ರೋಚಕ ಗೆಲುವು ಕಂಡ ಉತ್ಸಾಹದಲ್ಲಿದೆ. ಸದ್ಯಕ್ಕೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ರಾಜಸ್ಥಾನ್ ಇಂದಿನ ಪಂದ್ಯ ಗೆದ್ದು ಪ್ಲೇ ಆಫ್ ಕನಸು ನನಸಾಗಿಸುವ ಉತ್ಸಾಹದಲ್ಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.