ಐಪಿಎಲ್ 14: ಫಿನಿಶರ್ ಧೋನಿಯಿಂದ ಗೆದ್ದ ಚೆನ್ನೈ ಫೈನಲ್ ಗೆ

Webdunia
ಸೋಮವಾರ, 11 ಅಕ್ಟೋಬರ್ 2021 (08:42 IST)
ದುಬೈ: ಐಪಿಎಲ್ 14 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ವಿರುದ್ಧ ಪ್ಲೇ ಆಫ್ ಪಂದ್ಯದಲ್ಲಿ 4 ವಿಕೆಟ್ ಗಳಿಂದ ಗೆದ್ದು ಮೊದಲ ತಂಡವಾಗಿ ಫೈನಲ್ ಗೇರಿದೆ.


ವಿಶೇಷವೆಂದರೆ ಇಷ್ಟು ದಿನ ಫಾರ್ಮ್ ಕೊರತೆಯಿಂದ ಬಳಲುತ್ತಿದ್ದ ನಾಯಕ ಧೋನಿ ನಿನ್ನೆಯ ಪಂದ್ಯದಲ್ಲಿ ತಮ್ಮ ಹಳೆಯ ಫಿನಿಶರ್ ಅವತಾರ ದರ್ಶನ ಮಾಡಿದರು. 6 ಎಸೆತಗಳಲ್ಲಿ 3 ಬೌಂಡರಿ, ಒಂದು ಸಿಕ್ಸರ್ ಸಿಡಿಸಿ ಗೆಲುವು ಕೊಡಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಪೃ‍ಥ್ವಿ ಶಾ (60), ರಿಷಬ್ ಪಂತ್ (ಅಜೇಯ 57), ಹೆಟ್ ಮೇರ್ (37) ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಐಯರ್ 1 ರನ್ , ಆರಂಭಿಕ ಶಿಖರ್ ಧವನ್ 7 ರನ್ ಗೆ ಔಟಾಗಿದ್ದರಿಂದ ಡೆಲ್ಲಿಗೆ ಬೃಹತ್ ಮೊತ್ತ ಪೇರಿಸಲಾಗಲಿಲ್ಲ.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಚೆನ್ನೈಗೆ ಋತುರಾಜ್ ಗಾಯಕ್ ವಾಡ್, ರಾಬಿನ್ ಉತ್ತಪ್ಪ ಆಸರೆಯಾದರು. ಋತುರಾಜ್ 70 ರನ್ ಸಿಡಿಸಿದರೆ ಉತ್ತಪ್ಪ 63 ರನ್ ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಚೆನ್ನೈ 19.4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವು ಸಾಧಿಸುವುದರೊಂದಿಗೆ ಫೈನಲ್ ಗೆ ಲಗ್ಗೆಯಿಟ್ಟಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments