Select Your Language

Notifications

webdunia
webdunia
webdunia
webdunia

ಐಪಿಎಲ್ 14: ರಾಜಸ್ಥಾನ್ ವಿರುದ್ಧ ಗೆದ್ದು ಪ್ಲೇ ಆಫ್ ಆಸೆ ಜೀವಂತವಾಗಿರಿಸಿದ ಮುಂಬೈ

ಐಪಿಎಲ್ 14: ರಾಜಸ್ಥಾನ್ ವಿರುದ್ಧ ಗೆದ್ದು ಪ್ಲೇ ಆಫ್ ಆಸೆ ಜೀವಂತವಾಗಿರಿಸಿದ ಮುಂಬೈ
ದುಬೈ , ಬುಧವಾರ, 6 ಅಕ್ಟೋಬರ್ 2021 (08:46 IST)
ದುಬೈ: ಐಪಿಎಲ್ 14 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿತು. ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್ ಮನ್ ಗಳು ಈ ಪಂದ್ಯದಲ್ಲಿ ಮುಗ್ಗರಿಸಿದರು. ಲೂಯಿಸ್ 24 ರನ್ ಗಳಿಸಿದ್ದೇ ದೊಡ್ಡ ಮೊತ್ತ.

ಈ ಸಾಧಾರಣ ಮೊತ್ತ ಬೆನ್ನತ್ತಿದ ಮುಂಬೈಗೆ ಇಶಾನ್ ಕಿಶನ್ ಆಧಾರವಾದರು. ಮತ್ತೆ ಫಾರ್ಮ್ ಗೆ ಬಂದ ಇಶಾನ್ 25 ಎಸೆತಗಳಿಂದ 50 ರನ್ ಗಳಿಸಿ ಅಜೇಯರಾಗುಳಿದರು. ನಾಯಕ ರೋಹಿತ್ ಶರ್ಮಾ 22 ರನ್ ಗಳಿಸಿದರು. ಇದರಿಂದಾಗಿ 2 ಮುಂಬೈ 8.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿ ಗೆಲುವಿನ ನಗೆ ಬೀರಿತು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 14: ಆರ್ ಸಿಬಿಗೆ ಈ ಬಾರಿ ಕಪ್ ಗೆಲ್ಲಲು ಈ ಆಟಗಾರ ಸಿಡಿಯಬೇಕು!