Publish Date: Sat, 09 Oct 2021 (09:27 IST)
Updated Date: Sat, 09 Oct 2021 (09:43 IST)
ದುಬೈ: ಐಪಿಎಲ್ 14 ರಲ್ಲಿ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು ಇನ್ನೇನಿದ್ದರೂ ಪ್ಲೇ ಆಫ್ ಹಂತದ ಪಂದ್ಯಗಳು ಆರಂಭವಾಗುವ ಸಮಯ.
ನಾಳೆಯಿಂದ ಪ್ಲೇ ಆಫ್ ಹಂತದ ಪಂದ್ಯಗಳು ಆರಂಭವಾಗಲಿದೆ. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡಗಳು ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದಿವೆ.
ಆ ಪೈಕಿ ಮೊದಲ ಪಂದ್ಯ ನಾಳೆ ಡೆಲ್ಲಿ ಮತ್ತು ಚೆನ್ನೈ ನಡುವೆ ನಡೆಯಲಿದೆ. ಸೋಮವಾರ ನಡೆಯಲಿರುವ ಇನ್ನೊಂದು ಪ್ಲೇ ಆಫ್ ಪಂದ್ಯದಲ್ಲಿ ಆರ್ ಸಿಬಿ ಮತ್ತು ಕೆಕೆಆರ್ ಮುಖಾಮುಖಿಯಾಗಲಿವೆ. ಇದರಲ್ಲಿ ಸೋತ ತಂಡಗಳ ನಡುವೆ ಮತ್ತೊಂದು ಪ್ಲೇ ಆಫ್ ಪಂದ್ಯ ಬುಧವಾರ ನಡೆಯುವುದು. ಇದಾದ ಬಳಿಕ ಶುಕ್ರವಾರ ಫೈನಲ್ ಪಂದ್ಯ ನಡೆಯುವುದು. ಇವೆಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7.30 ಕ್ಕೆ ನಡೆಯಲಿದೆ.