Webdunia - Bharat's app for daily news and videos

Install App

ಐಪಿಎಲ್ 14: ಮ್ಯಾಕ್ಸ್ ವೆಲ್ ಅಬ್ಬರ, ಎಬಿಡಿ ಸಿಡಿಲಬ್ಬರ

Webdunia
ಸೋಮವಾರ, 19 ಏಪ್ರಿಲ್ 2021 (09:03 IST)
ಚೆನ್ನೈ: ಐಪಿಎಲ್ 14 ರ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟ್ಸ್ ಮನ್ ಗಳು ಅಕ್ಷರಶಃ ಸಿಡಿದು ತಂಡಕ್ಕೆ ಜಯ ಕೊಡಿಸಿದ್ದಾರೆ.
Photo Courtesy: Twitter


ಮೊದಲು ಬ್ಯಾಟಿಂಗ್ ಮಾಡಿದ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತು. ಮೊದಲಾರ್ಧದಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ 49 ಎಸೆತಗಳಲ್ಲಿ 78 ರನ್ ಸಿಡಿಸಿ ಅಬ್ಬರಿಸಿದರು. ದ್ವಿತಿಯಾರ್ಧದಲ್ಲಿ ಎಬಿಡಿ ವಿಲಿಯರ್ಸ್ ಸಿಡಿಲಬ್ಬರ. ಕೇವಲ 34 ಎಸೆತಗಳಲ್ಲಿ 76 ರನ್ ಸಿಡಿಸಿದ ಎಬಿಡಿ ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಆರ್ ಸಿಬಿ 38 ರನ್ ಗಳಿಂದ ಗೆಲುವು ಕಂಡಿತು.

ನಿನ್ನೆಯ ಇನ್ನೊಂದು ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಕನ್ನಡಿಗರಾ ಮಯಾಂಕ್ ಅಗರ್ವಾಲ್ 69, ಕೆಎಲ್ ರಾಹುಲ್ 61 ರನ್ ಗಳಿಸಿದರು. ಈ ಮೊತ್ತ ಬೆನ್ನತ್ತಿದ ಡೆಲ್ಲಿಗೆ 92 ರನ್ ಗಳಿಸಿದ ಶಿಖರ್ ಧವನ್ ಆಸರೆಯಾದರು. ಅಂತಿಮವಾಗಿ ಡೆಲ್ಲಿ 18.2 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿಮುಟ್ಟಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments