Webdunia - Bharat's app for daily news and videos

Install App

ಐಪಿಎಲ್ 14: ಕೊನೆಯ ಎಸೆತದಲ್ಲಿ ಗೆದ್ದ ಆರ್ ಸಿಬಿ

Webdunia
ಶನಿವಾರ, 9 ಅಕ್ಟೋಬರ್ 2021 (08:45 IST)
ದುಬೈ: ಐಪಿಎಲ್ 14 ರ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ ಬೆಂಗಳೂರು 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.
Photo Courtesy: Google


ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಆರಂಭಿಕರಾದ ಶಿಖರ್ ಧವನ್ 43, ಪೃಥ್ವಿ ಶಾ 48 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಕೇವಲ 10, ಶ್ರೇಯಸ್ ಐಯರ್ 18 ರನ್ ಗಳಿಸಿ ಔಟಾಗಿದ್ದರಿಂದ ಡೆಲ್ಲಿಗೆ ನಿರೀಕ್ಷಿತ ರನ್ ಬರಲಿಲ್ಲ. ಆರ್ ಸಿಬಿ ಪರ ಮೊಹಮ್ಮದ್ ಸಿರಾಜ್ 2 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿ 6 ರನ್ ಗಳಿಸುವಷ್ಟರಲ್ಲಿ ನಾಯಕ ಕೊಹ್ಲಿ (4), ದೇವದತ್ತ್ ಪಡಿಕ್ಕಲ್ (0) ರನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಆದರೆ ಈ ವೇಳೆ ಶ್ರೀಕರ ಭರತ್ 52 ಎಸೆತಗಳಿಂದ ಅಜೇಯ 78 ರನ್ ಗಳಿಸಿ ತಂಡಕ್ಕೆ ಗೆಲುವು ಕೊಡಿಸಿದರು. 33 ಎಸೆತಗಳಲ್ಲಿ 51 ರನ್ ಗಳಿಸಿ ಗ್ಲೆನ್ ಮ್ಯಾಕ್ಸ್ ವೆಲ್ ಉತ್ತಮ ಸಾಥ್ ನೀಡಿದರು. ಅಂತಿಮ ಎಸೆತವನ್ನು ಸಿಕ್ಸರ್ ಗಟ್ಟಿದ ಭರತ್ ಗೆಲುವು ಕೊಡಿಸಿದರು. ಅಂತಿಮವಾಗಿ ಆರ್ ಸಿಬಿ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments