Publish Date: Fri, 21 May 2021 (07:22 IST)
Updated Date: Fri, 21 May 2021 (07:24 IST)
ಮುಂಬೈ: ಕೊರೋನಾದಿಂದಾಗಿ ರದ್ದಾದ ಐಪಿಎಲ್ 14 ರ ಉಳಿದ ಪಂದ್ಯಗಳು ಇಂಗ್ಲೆಂಡ್ ನಲ್ಲಿ ನಡೆಯುವ ಸಾಧ‍್ಯತೆಯಿದೆ ಎಂದು ಮೂಲಗಳು ಹೇಳಿವೆ.
ಮೇ 29 ರಂದು ಬಿಸಿಸಿಐ ಸಾಮಾನ್ಯ ಸಭೆ ನಡೆಯಲಿದ್ದು, ಈ ವೇಳೆ ಐಪಿಎಲ್ ಪಂದ್ಯಗಳನ್ನು ಎಲ್ಲಿ ಆಯೋಜಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು. ಯುಎಇ ಮತ್ತು ಇಂಗ್ಲೆಂಡ್ ತಾಣಗಳಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ.
ಇಂಗ್ಲೆಂಡ್ ವಿರುದ್ಧ ಆಡಲಿರುವ ಐದು ಟೆಸ್ಟ್ ಪಂದ್ಯಗಳ ಸರಣಿ ಕಡಿತಗೊಳಿಸಿ ಅಲ್ಲಿಯೇ ಐಪಿಎಲ್ ನಡೆಸುವ ಕುರಿತಂತೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯೊಂದಿಗೆ ಮಾತುಕತೆಯಾಗುತ್ತಿದೆ. ಒಂದು ವೇಳೆ ಭಾರತದಲ್ಲಿ ವಿಶ್ವಕಪ್ ಟಿ20 ಪಂದ್ಯ ಆಯೋಜಿಸಲು ಸಾಧ್ಯವಾಗದೇ ಹೋದಲ್ಲಿ ಅದನ್ನೂ ಅಲ್ಲಿಯೇ ಆಯೋಜಿಸಲೂ ಬಿಸಿಸಿಐ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.