Select Your Language

Notifications

webdunia
webdunia
webdunia
webdunia

ಐಪಿಎಲ್ 14: ಅಂತೂ ಇಂತೂ ಗೆದ್ದ ಸನ್ ರೈಸರ್ಸ್ ಹೈದರಾಬಾದ್

ಐಪಿಎಲ್ 14: ಅಂತೂ ಇಂತೂ ಗೆದ್ದ ಸನ್ ರೈಸರ್ಸ್ ಹೈದರಾಬಾದ್
ದುಬೈ , ಮಂಗಳವಾರ, 28 ಸೆಪ್ಟಂಬರ್ 2021 (08:45 IST)
ದುಬೈ: ಸತತ ಸೋಲುಗಳಿಂದ ಕಂಗೆಟ್ಟಿದ್ದ ಸನ್ ರೈಸರ್ಸ್ ಹೈದರಾಬಾದ್ ಅಂತೂ ಇಂತೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಕಂಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ನಾಯಕ ಸಂಜು ಸ್ಯಾಮ್ಸನ್ ಸ್ಪೋಟಕ ಆಟವಾಡಿ 82 ರನ್ ಗಳಿಸಿದರು.

ಈ ಮೊತ್ತವನ್ನು ಆತ್ಮವಿಶ್ವಾಸದಿಂದಲೇ ಬೆನ್ನತ್ತಿದ ಹೈದರಾಬಾದ್ 18.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಆರಂಭಿಕ ಜೇಸನ್ ರಾಯ್ 60,  ನಾಯಕ ಕೇನ್ ವಿಲಿಯಮ್ಸನ್ ಔಟಾಗದೇ 51 ರನ್ ಗಳಿಸಿದರು. ಇದರೊಂದಿಗೆ ಹೈದರಾಬಾದ್ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿತು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 14: ರೋಹಿತ್ ಕೈಗೆ ಏಟಾದರೆ ಕೊಹ್ಲಿಗೆ ಆತಂಕ!