Webdunia - Bharat's app for daily news and videos

Install App

IPL 2005: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರು ಯಾರು ಗೊತ್ತಾ

Sampriya
ಮಂಗಳವಾರ, 22 ಏಪ್ರಿಲ್ 2025 (14:31 IST)
Photo Courtesy X
ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಅವರ ಮಹತ್ವದ ದಾಖಲೆಯೊಂದನ್ನು ಮುರಿದರು.

ರನ್‌ ಮಿಷಿನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಅವರ ಪಂದ್ಯಶ್ರೇಷ್ಠ ದಾಖಲೆಯನ್ನು ರೋಹಿತ್‌ ಮುರಿದರು. ಈಚೆಗೆ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಅಜೇಯ 76 ರನ್‌ ಗಳಿಸಿದ ರೋಹಿತ್‌ ಐಪಿಎಲ್‌ನಲ್ಲಿ 20ನೇ ಬಾರಿ ಪಂದ್ಯದ ಆಟಗಾರ ಗೌರವಕ್ಕೆ ಪಾತ್ರವಾದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮಾಜಿ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ತಮ್ಮ 184 ಐಪಿಎಲ್ ಪಂದ್ಯಗಳಲ್ಲಿ 25 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದು ಐಪಿಎಲ್‌ನ ಇತಿಹಾಸದಲ್ಲೇ ಉತ್ತಮ ದಾಖಲೆಯಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್ ತಮ್ಮ ಐಪಿಎಲ್ ವೃತ್ತಿಜೀವನದ 142 ಪಂದ್ಯಗಳಲ್ಲಿ 22 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದು ಎರಡನೇ ಅತ್ಯುತ್ತಮ ದಾಖಲೆಯಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಆಡಿರುವ 264 ಐಪಿಎಲ್ ಪಂದ್ಯಗಳಲ್ಲಿ 20 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 19 ಬಾರಿ ಪಂದ್ಯದ ಆಟಗಾರ ಗೌರವ ಪಡೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಹಂಗಾಮಿ ನಾಯಕ ಎಂಎಸ್ ಧೋನಿ ಮತ್ತು ಡೇವಿಡ್ ವಾರ್ನರ್ ಅವರು ತಲಾ 18 ಬಾರಿ ಪ್ರಶಸ್ತಿಗೆ ಪಾತ್ರವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

IPL 2005: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರು ಯಾರು ಗೊತ್ತಾ

Ambati Rayudu: ಆರ್ ಸಿಬಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಅಂಬಟಿ ರಾಯುಡು, ಇವರೇನಾ ಅವರು ಎಂದ ಫ್ಯಾನ್ಸ್

BCCI Annual Contract: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಯಾವ ಆಟಗಾರರಿಗೆ ಯಾವ ಶ್ರೇಣಿ, ವೇತನವೆಷ್ಟು ಇಲ್ಲಿದೆ ವಿವರ

Virat Kohli: ಶ್ರೇಯಸ್ ಅಯ್ಯರ್ ಎದುರು ಸಂಭ್ರಮಾಚರಿಸಿ ತಾವೇ ಇಕ್ಕಟ್ಟಿಗೆ ಸಿಲುಕಿದ ವಿರಾಟ್ ಕೊಹ್ಲಿ: ನಿಮ್ಗಿದು ಬೇಕಿತ್ತಾ

ಮುಂದಿನ ಸುದ್ದಿ
Show comments