Publish Date: Sat, 09 Apr 2022 (20:15 IST)
Updated Date: Sat, 09 Apr 2022 (20:16 IST)
ಮುಂಬೈ: ಐಪಿಎಲ್ 2022 ರಲ್ಲಿ ಮತ್ತೆ ಗೆಲುವಿನ ಖಾತೆ ತೆರೆಯುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿಫಲವಾಗಿದೆ. ಇಂದಿನ ಪಂದ್ಯದಲ್ಲಿ ಸನ್ ರೈಸರ್ನ್ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲುಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಮೊಯಿನ್ ಅಲಿ 48, ಅಂಬಟಿ ರಾಯುಡು 27, ರವೀಂದ್ರ ಜಡೇಜಾ 23 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ 17.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಅಭಿಷೇಕ್ ಶರ್ಮಾ 75, ಕೇನ್ ವಿಲಿಯಮ್ಸನ್ 32, ರಾಹುಲ್ ತ್ರಿಪಾಠಿ 39 ರನ್ ಗಳಿಸಿದರು. ಇದರೊಂದಿಗೆ ಸಿಎಸ್ ಕೆ 12 ವರ್ಷಗಳ ಬಳಿಕ ಸತತ ನಾಲ್ಕು ಸೋಲು ಕಂಡು ಹೀನಾಯ ದಾಖಲೆಯನ್ನು ತನ್ನದಾಗಿಸಿಕೊಂಡಿತು.