ಮುಂಬೈ: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಗೆಲುವು ಸಾಧಿಸಿದೆ. ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ ಸಿಬಿ 4 ವಿಕೆಟ್ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಜೋಸ್ ಬಟ್ಲರ್ ಅಜೇಯ 70, ದೇವದತ್ತ್ ಪಡಿಕ್ಕಲ್ 37, ಹೆಟ್ಮೈರ್ ಅಜೇಯ 42 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿ 19.1 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ನಾಯಕ ಫಾ ಡು ಪ್ಲೆಸಿಸ್ 29, ಅನೂಜ್ ರಾವತ್ 26 ರನ್, ಶಹಬಾಜ್ ಅಹಮ್ಮದ್ 45 ರನ್ ಗಳಿಸಿ ಔಟಾದರು. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 44 ರನ್ ಗಳ ಸ್ಪೋಟಕ ಇನಿಂಗ್ಸ್ ಆಡಿ ತಂಡಕ್ಕೆ ಗೆಲುವು ಕೊಡಿಸಿದರು. ಇದರೊಂದಿಗೆ ಆರ್ ಸಿಬಿ ಮತ್ತೊಂದು ಗೆಲುವು ಕಂಡಿತು.