Select Your Language

Notifications

webdunia
webdunia
webdunia
Wednesday, 9 April 2025
webdunia

ಐಪಿಎಲ್ 2022: ಪ್ಲೇ ಆಫ್ ಕನಸು ಜೀವಂತವಾಗಿಟ್ಟ ಆರ್ ಸಿಬಿ

ಐಪಿಎಲ್ 2022
ಮುಂಬೈ , ಶುಕ್ರವಾರ, 20 ಮೇ 2022 (08:30 IST)
ಮುಂಬೈ: ಐಪಿಎಲ್ 2022 ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಕನಸು ಜೀವಂತವಾಗಿರಿಸಿದೆ.

ಕೊನೆಯ ಲೀಗ್ ಪಂದ್ಯದಲ್ಲಿ ಬೆಂಗಳೂರು ಬ್ಯಾಟಿಗರು ಮಿಂಚಿದ್ದರಿಂದ ತಂಡಕ್ಕೆ ಅನಿವಾರ್ಯ ಸಂದರ್ಭದಲ್ಲಿ ಭರ್ಜರಿ ಜಯ ಸಿಕ್ಕಿತು. ಒಂದು ವೇಳೆ ಈ ಪಂದ್ಯ ಸೋತಿದ್ದರೆ ಆರ್ ಸಿಬಿ ಐಪಿಎಲ್ ನಿಂದ ಹೊರಬೀದ್ದಂತಾಗುತ್ತಿತ್ತು.

ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ನಾಯಕ ಹಾರ್ದಿಕ್ ಪಾಂಡ್ಯ ಅಜೇಯ 62 ರನ್ ಸಿಡಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಆರಂಭಿಕರು ಉತ್ತಮ ಆರಂಭ ನೀಡಿದರು. ವಿರಾಟ್ ಕೊಹ್ಲಿ ಭರ್ಜರಿ 73, ಫಾ ಡು ಪ್ಲೆಸಿಸ್ 44 ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಬಳಿಕ ಗ್ಲೆನ್ ಮ್ಯಾಕ್ಸ್ ವೆಲ್ ಅಜೇಯ 40 ರನ್ ಸಿಡಿಸಿದರು. ಇದರಿಂದಾಗಿ ಆರ್ ಸಿಬಿ 18.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 170 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಪಂದ್ಯದಲ್ಲಿ ಸೋತರೆ ಆರ್ ಸಿಬಿ ಪ್ಲೇ ಆಫ್ ಹಾದಿ ಸುಗಮವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಕೃಷ್ಣ ಜನ್ಮಭೂಮಿ ವಿವಾದ ಶುರು: ಕೋರ್ಟ್ ಮೊರೆ