IPL 2025: ಮತ್ತೆ ನಾಲ್ಕು ವಿಶ್ವದಾಖಲೆ ನಿರ್ಮಿಸಿದ ಕಿಂಗ್‌ ಕೊಹ್ಲಿ: ಐಪಿಎಲ್‌ ಇತಿಹಾಸದಲ್ಲೇ ಇದೇ ಮೊದಲು

Sampriya
ಬುಧವಾರ, 28 ಮೇ 2025 (14:24 IST)
Photo Courtesy X
ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಬ್ಯಾಟರ್‌ ಮತ್ತೆ ಮೂರು ವಿಶ್ವದಾಖಲೆ ನಿರ್ಮಿಸಿದ್ದಾರೆ. ರನ್‌ಮಿಷಿನ್‌ ಖ್ಯಾತಿಯ ಕೊಹ್ಲಿ ಮಂಗಳವಾರ ನಡೆದ ಲಖನೌ ವಿರುದ್ಧದ ಪಂದ್ಯದಲ್ಲಿ ಈ ಸಾಧನೆಯನ್ನು ನಿರ್ಮಿಸಿದ್ದಾರೆ.

ವಿರಾಟ್‌ ಕೊಹ್ಲಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 9,000 ರನ್‌ಗಳ ಮೈಲಿಗಲ್ಲು ತಲುಪಿದ್ದಾರೆ.  ಆ ಮೂಲಕ ತಂಡವೊಂದರ ಪರ 9,000 ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಈ ಪೈಕಿ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಕೊಹ್ಲಿ 8,606 ರನ್‌ ಗಳಿಸಿದ್ದಾರೆ. ಹಾಗೆಯೇ ಚಾಂಪಿಯನ್ಸ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆರ್‌ಸಿಬಿ ಪರ 424 ರನ್ ಪೇರಿಸಿದ್ದಾರೆ. ಈ ದಾಖಲೆಯ ಹಾದಿಯಲ್ಲಿ ರೋಹಿತ್‌ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು ಮುಂಬೈ ಇಂಡಿಯನ್ಸ್‌ ಪರ  6,060 ರನ್‌ ಗಳಿಸಿದ್ದಾರೆ.

ವಿರಾಟ್‌ ಕೊಹ್ಲಿ ಐಪಿಎಲ್‌ ಟೂರ್ನಿಯ ಆವೃತ್ತಿಯೊಂದಲ್ಲಿ ಐದನೇ ಬಾರಿ 600 ರನ್‌ ದಾಟಿದ ದಾಖಲೆ ಬರೆದಿದ್ದಾರೆ. ಈ ಮೂಲಕ ಕನ್ನಡಿಗ ಕೆ.ಎಲ್‌.ರಾಹುಲ್‌ (4 ಬಾರಿ) ಅವರನ್ನು ಹಿಂದಿಕ್ಕಿದ್ದಾರೆ.  ಐಪಿಎಲ್ ಋತುವಿನಲ್ಲಿ ಐದನೇ ಬಾರಿ ಕೊಹ್ಲಿ 600ಕ್ಕೂ ಹೆಚ್ಚು ರನ್ ದಾಖಲೆ ಬರೆದಿದ್ದಾರೆ. ಈ ಹಿಂದೆ 2013, 2016, 2013 ಹಾಗೂ 2024ರ ಆವೃತ್ತಿಗಳಲ್ಲೂ 600ಕ್ಕೂ ಹೆಚ್ಚು ರನ್ ಕಲೆ ಹಾಕಿದ್ದರು.

ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಸಾಧನೆ ಮಾಡಿದ್ದಾರೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಬ್ಯಾಟರ್ (63) ಎಂದೆನಿಸಿದ್ದಾರೆ.  ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ (62) ದಾಖಲೆಯನ್ನು ಮುರಿದಿದ್ದಾರೆ.

ಹಾಲಿ ಐಪಿಎಲ್‌ನಲ್ಲಿ ಕೊಹ್ಲಿ ಎಂಟು ಅರ್ಧ‌ಶತಕಗಳನ್ನು ಹೊಂದಿದ್ದಾರೆ. ಐಪಿಎಲ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಬ್ಯಾಟರ್ ಎಂಬ ದಾಖಲೆಗೂ ಕೊಹ್ಲಿ ಭಾಜನರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಎಂಟನೇ ಸಲ ಅರ್ಧಶತಕದ ಸಾಧನೆ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments