IPL 2025: 9 ವರ್ಷಗಳ ವನವಾಸದ ಬಳಿಕ ಫೈನಲ್‌ಗೆ ಆರ್‌ಸಿಬಿ: ಈ ಬಾರಿ ಕಪ್‌ ನಮ್ದೆ ಎಂದ ಬೆಂಗಳೂರು ತಂಡದ ಫ್ಯಾನ್ಸ್‌

Sampriya
ಗುರುವಾರ, 29 ಮೇ 2025 (22:20 IST)
Photo Courtesy X
ಚಂಡೀಗಢ: ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಐಪಿಎಲ್‌ನಲ್ಲಿ ಫೈನಲ್‌ ಪ್ರವೇಶಿಸಿದೆ. ಚೊಚ್ಚಲ ಕಪ್‌ ಎದುರು ನೋಡುತ್ತಿರುವ ಆರ್‌ಸಿಬಿ ತಂಡವು ನಾಲ್ಕನೇ ಬಾರಿ ಫೈನಲ್‌ ಪ್ರವೇಶಿಸಿದಂತಾಗಿದೆ. 

ಆರ್‌ಸಿಬಿ ತಂಡವು 2009, 2011 ಮತ್ತು 2016ರಲ್ಲಿ ಫೈನಲ್‌ ಪ್ರವೇಶ ಮಾಡಿತ್ತು. 2009ರಲ್ಲಿ ಡೆಕ್ಕನ್‌ ಚಾರ್ಜಸ್‌ ವಿರುದ್ಧ, 2011ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಮತ್ತು 2016ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಫೈನಲ್‌ನಲ್ಲಿ ಮುಗ್ಗರಿಸಿತ್ತು. 

ಆರ್‌ಸಿಬಿ ತಂಡವು ಈ ಬಾರಿ ಫೈನಲ್‌ಗೇರುತ್ತಿದ್ದಂತೆ ಬೆಂಗಳೂರಿನಲ್ಲೂ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಈ ಬಾರಿ ಕಪ್‌ ನಮ್ದೆ ಎಂಬ ಘೋಷಣೆಯೂ ಮೊಳಗಿದೆ. ಜೂನ್‌ 3ರಂದು ಫೈನಲ್‌ ಹಣಾಹಣಿ ನಡೆಯಲಿದೆ. 

ಇಲ್ಲಿನ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಮೊದಲ ಕ್ವಾಲಿಫೈಯರ್  ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್‌ ಆಯ್ದುಕೊಂಡಿತ್ತು. ಬೌಲರ್‌ಗಳ ಸಾಂಘಿಕ ದಾಳಿಯ ಬಳಿಕ ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ ಅವರ ಅಜೇಯ ಅರ್ಧಶತಕ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಐಪಿಎಲ್‌ನ ಮೊದಲ ಕ್ವಾಲಿಫೈಯರ್‌ನಲ್ಲಿ ಎಂಟು ವಿಕೆಟ್‌ಗಳಿಂದ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮಣಿಸಿತು. 

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಬೌಲರ್‌ಗಳ ಬೆಂಕಿ ದಾಳಿಗೆ ಪಂಜಾಬ್‌ ಕಿಂಗ್ಸ್‌ ತಂಡವು ಅಕ್ಷರಶಃ ತತ್ತರಿಸಿತ್ತು. 14.1 ಓವರ್ ಗಳಲ್ಲಿ 101 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದ್ದು, ಆರ್‌ಸಿಬಿ ಗೆಲುವಿಗೆ ಸುಲಭ ಗುರಿ ನೀಡಿತ್ತು. 10 ಓವರ್‌ಗಳಲ್ಲಿ ಎರಡು ವಿಕೆಟ್‌ಗೆ 106 ರನ್‌ ಗಳಿಸಿ ಜಯಭೇರಿ ಬಾರಿಸಿತು. ಫಿಲ್ ಸಾಲ್ಟ್‌ ಅಜೇಯ 56 ರನ್‌ ಬಾರಿಸಿದರು. ವಿರಾಟ್‌ ಕೊಹ್ಲಿ 12, ಮಯಂಕ್ ಅಗರವಾಲ್‌  19 ರನ್‌ ಗಳಿಸಿದರು. ನಾಯಕ ರಜತ್‌ ಪಾಟೀದಾರ್‌ ಅಜೇಯ 15 ರನ್‌ ಗಳಿಸಿದರು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments