ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿನ ಚಿನ್ನಸ್ವಾಮಿ ಸ್ವೇಡಿಯಂನಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 11 ರನ್‌ಗಳಿಂದ ರೋಚಕ ಗೆಲುವು ಸಾಧಿಸಿದೆ. ಇದು ಆರ್‌ಸಿನಿ ತಂಡಕ್ಕೆ ಈ ಆವೃತ್ತಿಯಲ್ಲಿ ತವರಿನಲ್ಲಿ ದೊರೆತ ಮೊದಲ ಜಯವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ್ದ 206 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 194 ಗಳಿಸಿ ಸೋಲು ಅನುಭವಿಸಿದೆ. ಜೋಶ್ ಹ್ಯಾಜಲ್‌ವುಡ್ ನಾಲ್ಕು ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.
ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ (70) ಹಾಗೂ ದೇವದತ್ತ ಪಡಿಕ್ಕಲ್ (50) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಇಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 205 ರನ್‌ಗಳ ಬೃಹತ್ ಮೊತ್ತ ಗಳಿಸಿತ್ತು.
ಈವರೆಗೆ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಆರು ಗೆಲುವುಗಳನ್ನು ದಾಖಲಿಸಿದೆ. ಮತ್ತೊಂದೆಡೆ ಒಂಬತ್ತು ಪಂದ್ಯಗಳಲ್ಲಿ ಎರಡು ಗೆಲುವು ಮಾತ್ರ ದಾಖಲಿಸಿದೆ.ರಾಹುಲ್ ದ್ರಾವಿಡ್ ಮಾರ್ಗದರ್ಶನದ ರಾಯಲ್ಸ್ ತಂಡಕ್ಕೆ ಇದು 9 ಪಂದ್ಯಗಳಲ್ಲಿ ಏಳನೇ ಸೋಲಾಗಿದೆ.
ತವರಿನಾಚೆ ಸತತ ಐದು ಪಂದ್ಯಗಳಲ್ಲಿ ಜಯ ಸಾಧಿಸಿರುವ ಆರ್‌ಸಿಬಿ, ತವರಿನ ಮೈದಾನದಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಅಲ್ಲದೆ ತವರಿನ ನೆಲದಲ್ಲಿ ಮೊದಲ ಗೆಲುವು ದಾಖಲಿಸಿದೆ.