Webdunia - Bharat's app for daily news and videos

Install App

IPL 2025: ತವರಿನಾಚೆ ಆರ್‌ಸಿಬಿ ತಂಡಕ್ಕೆ ಮೊದಲ ಸೋಲು: ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Sampriya
ಶನಿವಾರ, 24 ಮೇ 2025 (00:08 IST)
Photo Courtesy X
ಲಖನೌ: ಹಾಲಿ ಐಪಿಎಲ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ತವರಿನಾಚೆಯ ತಾಣಗಳಲ್ಲಿ ಮೊದಲ ಸೋಲು ಅನುಭವಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಿತು.

ಲಖನೌ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್‌ 42 ರನ್‌ಗಳಿಂದ ಆರ್‌ಸಿಬಿ ತಂಡವನ್ನು ಮಣಿಸಿ ಅಬ್ಬರಿಸಿದೆ. ಈ ಪಂದ್ಯದಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಆರ್‌ಸಿಬಿ ಆಸೆ ಕುಸಿದಿದೆ. ಭಾರೀ ಅಂತರದಿಂದ ಸೋಲು ಕಂಡಿದ್ದರಿಂದ ಆರ್‌ಸಿಬಿ ರನ್‌ ರೇಟ್‌ ಕಡಿಮೆ ಆಗಿದೆ.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಸನ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 231 ರನ್‌ ಸಿಡಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆರ್‌ಸಿಬಿ 19.5 ಓವರ್‌ಗಳಲ್ಲಿ 189 ರನ್‌ಗಳೊಗೆ ಆಲೌಟ್ ಆಯಿತು.

ಸವಾಲಿನ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡದ ಆರಂಭ ಭರ್ಜರಿಯಾಗಿತ್ತು. ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಜೋಡಿ ಮೊದಲ ವಿಕೆಟ್‌ಗೆ ಸೊಗಸಾದ ಆಟದ ಪ್ರದರ್ಶನ ನೀಡಿದರು. ಉತ್ತಮ ಲಯದಲ್ಲಿದ್ದ ವಿರಾಟ್‌ 7 ಬೌಂಡರಿ, 1 ಸಿಕ್ಸರ್ ಸಹಾಯದಿಂದ 43 ರನ್‌ ಸಿಡಿಸಿದರು.

ಗಾಯದ ಸಮಸ್ಯೆಯಿಂದ ಕಳೆದ ಕೆಲವು ಪಂದ್ಯಗಳಿಂದ ದೂರ ಉಳಿದಿದ್ದ ಫಿಲ್ ಸಾಲ್ಟ್‌ ಅಬ್ಬರಿಸಿದರು. ಇವರು 32 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್‌ ಸಹಾಯದಿಂದ 62 ರನ್‌ ಸಿಡಿಸಿದರು. ನಾಯಕ ಜಿತೇಶ್‌ ಶರ್ಮಾ 24 ರನ್‌ ಬಾರಿಸಿ ಔಟ್ ಆದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಆರ್‌ಸಿಬಿ ರನ್‌ ಕಲೆ ಹಾಕುವಲ್ಲಿ ವಿಫಲವಾಯಿತು.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಎಸ್‌ಆರ್‌ಎಚ್‌ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ಅಭಿಷೇಕ್‌ ಶರ್ಮಾ (34) ಹಾಗೂ ಟ್ರಾವಿಸ್‌ ಹೆಡ್‌ (17) ಮೊದಲ ವಿಕೆಟ್‌ಗೆ 4 ಓವರ್‌ಗಳಲ್ಲಿ 54 ರನ್‌ ಸಿಡಿಸಿದರು. ಮೂರನೇ ವಿಕೆಟ್‌ಗೆ ಇಶಾನ್‌ ಕಿಶನ್‌ (ಅಜೇಯ 94) ಹಾಗೂ ಭರವಸೆಯ ಆಟಗಾರ ಹ್ಯಾನ್ರಿಕ್ ಕ್ಲಾಸೇನ್‌ (24) ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments