ಜೈಪುರ: ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಇಂದು ಜೈಪುರದ ಸವಾಯಿ ಮಾನ್ಶಿಂಗ್ ಒಳಾಂಗಣ ಕ್ರೀಡಾಂಗಣದಲ್ಲಿ ತನ್ನ ಎರಡನೇ ಐಪಿಎಲ್ ಪಂದ್ಯದಲ್ಲಿ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲು ಸಿದ್ಧವಾಗಿದೆ.
ತವರಿನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿರುವ ರಾಜಸ್ಥಾನ್ ರಾಯಲ್ಸ್ ತಮ್ಮ ಗೆಲುವಿನ ಹಾದಿಯನ್ನು ಮುಂದುವರಿಸುವ ಗುರಿಯನ್ನು ಹೊಂದಿದೆ. ರಾಯಲ್ಸ್ ಮಾರ್ಚ್ 24 ರಂದು ತಮ್ಮ ಆರಂಭಿಕ ಹಣಾಹಣಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಮಣಿಸಿ ಸದ್ಯ ಐಪಿಎಲ್ ಪಾಯಿಂಟ್‌ಗಳ ಪಟ್ಟಿಯಲ್ಲಿ 2 ನೇ ಸ್ಥಾನದಲ್ಲಿದೆ.
ಸವಾಯಿ ಮಾನಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧದ ಆರಂಭಿಕ ಮುಖಾಮುಖಿಯಲ್ಲಿ ಗೆಲುವು ಪಡೆದುಕೊಳ್ಳುವಲ್ಲಿ ವಿಫಲವಾಯಿತು.