Webdunia - Bharat's app for daily news and videos

Install App

ಐಪಿಎಲ್: ಮೊದಲ 17 ಪಂದ್ಯಗಳ ವೇಳಾಪಟ್ಟಿ ಬಿಡುಗಡೆ! ಆದರೆ ಷರತ್ತುಗಳು ಅನ್ವಯ!

Webdunia
ಮಂಗಳವಾರ, 19 ಫೆಬ್ರವರಿ 2019 (15:49 IST)
ಮುಂಬೈ: ಐಪಿಎಲ್ ನ ಈ ವರ್ಷದ ಆವೃತ್ತಿಯ ಮೊದಲ 17 ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಆದರೆ ಇದರಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯನ್ನೂ ನೀಡಲಾಗಿದೆ.


ಈ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಐಪಿಎಲ್ ವೇಳಾಪಟ್ಟಿ ಬಗ್ಗೆ ಗೊಂದಲಗಳಿವೆ. ಆದರೆ ಇದೀಗ ಸದ್ಯಕ್ಕೆ ತಾತ್ಕಾಲಿಕವೆಂಬಂತೆ ಮೊದಲ 17 ಪಂದ್ಯಗಳ ದಿನಾಂಕ ಪ್ರಕಟಿಸಲಾಗಿದೆ. ಒಂದು ವೇಳೆ ಈ ಸಂದರ್ಭದಲ್ಲಿ ಚುನಾವಣೆ ದಿನಾಂಕ ಘೋಷಣೆಯಾದರೆ, ಈ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಲಿದೆ.

ಮಾರ್ಚ್ 23 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯ ಚೆನ್ನೈಯಲ್ಲಿ ನಡೆಯಲಿದೆ. ಮಾರ್ಚ್ 24 ರಂದು ಮುಂಬೈ ಇಂಡಿಯನ್ಸ್-ಡೆಲ್ಲಿ ಡೇರ್ ಡೆವಿಲ್ಸ್‍ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್-ಸನ್ ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ ನಡೆಯಲಿದೆ.

ಉಳಿದ ಪಂದ್ಯಗಳ ವಿವರಗಳು ಇಂತಿವೆ:
ಮಾರ್ಚ್ 25: ರಾಜಸ್ಥಾನ್ ರಾಯಲ್ಸ್-ಕಿಂಗ್ಸ್ ಇಲೆವೆನ್ ಪಂಜಾಬ್ (ಜೈಪುರದಲ್ಲಿ)
ಮಾರ್ಚ್ 26: ಡೆಲ್ಲಿ ಡೇರ್ ಕ್ಯಾಪಿಟಲ್ಸ್-ಚೆನ್ನೈ ಸೂಪರ್ ಕಿಂಗ್ಸ್ (ದೆಹಲಿ)
ಮಾರ್ಚ್ 27: ಕೋಲ್ಕೊತ್ತಾ ನೈಟ್ ರೈಡರ್ಸ್-ಕಿಂಗ್ಸ್ ಇಲೆವೆನ್ ಪಂಜಾಬ್ (ಕೋಲ್ಕೊತ್ತಾ)
ಮಾರ್ಚ್ 28: ರಾಯಲ್ ಚಾಲೆಂಜರ್ಸ್ ಬೆಂಗಳೂರು-ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 29: ಸನ್ ರೈಸರ್ಸ್ ಹೈದರಾಬಾದ್-ರಾಜಸ್ಥಾನ್ ರಾಯಲ್ಸ್ (ಹೈದರಾಬಾದ್)
ಮಾರ್ಚ್‍ 30: ಕಿಂಗ್ಸ್ ಇಲೆವೆನ್ ಪಂಜಾಬ್-ಮುಂಬೈ ಇಂಡಿಯನ್ಸ್ (ಮೊಹಾಲಿ)
ಡೆಲ್ಲಿ ಕ್ಯಾಪಿಟಲ್ಸ್-ಕೋಲ್ಕೊತ್ತಾ ನೈಟ್ ರೈಡರ್ಸ್ (ದೆಹಲಿ)
ಮಾರ್ಚ್ 31: ಸನ್ ರೈಸರ್ಸ್ ಹೈದರಾಬಾದ್-ರಾಯಲ್ ಚಾಲೆಂಜರ್ಸ್ ಬೆಂಗಳೂರು (ಹೈದರಾಬಾದ್)
ಚೆನ್ನೈ ಸೂಪರ್ ಕಿಂಗ್ಸ್-ರಾಜಸ್ಥಾನ್ ರಾಯಲ್ಸ್ (ಚೆನ್ನೈ)
ಏಪ್ರಿಲ್ 1: ಕಿಂಗ್ಸ್ ಇಲೆವೆನ್ ಪಂಜಾಬ್-ಡೆಲ್ಲಿ ಕ್ಯಾಪಿಟಲ್ಸ್ (ಮೊಹಾಲಿ)
ಏಪ್ರಿಲ್ 2: ರಾಜಸ್ಥಾನ್ ರಾಯಲ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು (ಜೈಪುರ)
ಏಪ್ರಿಲ್ 3: ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್ (ಮುಂಬೈ)
ಏಪ್ರಿಲ್ 4: ಡೆಲ್ಲಿ ಕ್ಯಾಪಿಟಲ್ಸ್-ಸನ್ ರೈಸರ್ಸ್ ಹೈದರಾಬಾದ್ (ದೆಹಲಿ)
ಏಪ್ರಿಲ್ 5: ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೋಲ್ಕೊತ್ತಾ ನೈಟ್ ರೈಡರ್ಸ್ (ಬೆಂಗಳೂರು)

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments