Select Your Language

Notifications

webdunia
webdunia
webdunia
webdunia

ಐಪಿಎಲ್: ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

IPL

Sampriya

ಚಂಡೀಗಢ , ಮಂಗಳವಾರ, 9 ಏಪ್ರಿಲ್ 2024 (20:00 IST)
Photo Courtesy X
ಚಂಡೀಗಢ: ಇಂದು ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್​ನ  23ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.

ಈ ಪಂದ್ಯದ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ ಉಭಯ ತಂಡಗಳಿವೆ.  ಟಾಸ್ ಗೆದ್ದ ಪಂಜಾಬ್ ಕಿಂಗ್ಸ್‌ ಬೌಲಿಂಗ್ ಆಯ್ದುಕೊಂಡು, ಸನ್‌ರೈಸರ್ಸ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ, ಸನ್​ರೈಸರ್ಸ್ ಹೈದರಾಬಾದ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಎಸ್​ಆರ್​ಹೆಚ್ ತಂಡವು 5ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ 6ನೇ ಸ್ಥಾನದಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2024: ಧೋನಿ ಅಭಿಮಾನಿಗಳ ಕೀಟಲೆ ಮಾಡಿದ ರವೀಂದ್ರ ಜಡೇಜಾ