ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೋಮವಾರ ಪಂಜಾಬ್ ಕಿಂಗ್ಸ್ ತಂಡದ ಜತೆ ಸೆಣೆಸಲಿದೆ.
ಟಾಸ್ ಗೆದ್ದ ಆರ್‌ಸಿಬಿ ತಂಡವು ಫೀಲ್ಡಿಂಗ್ ಆಯ್ದುಗೊಂಡು ಪಂಜಾಬ್ ತಂಡವನ್ನು ಬ್ಯಾಂಟಿಂಗ್ ಆಹ್ವಾನಿಸಿದೆ. ಚೆನ್ನೈನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದದ್ಧ ಸೋಲು ಕಂಡಿತು. ಇನ್ನೂ ನಡೆಯುವ ಎರಡನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯುವ ಹುಮ್ಮಸ್ಸಿನಲ್ಲಿ ಗ್ರೌಂಡ್‌ಗೆ ಇಳಿದಿದೆ.
ಆರ್‌ಸಿಬಿಯ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಗಮನ ನೆಟ್ಟಿದ್ದು, ತವರಿನಲ್ಲಿ ಅಭಿಮಾನಿಗಳನ್ನು ಖುಷಿ ಪಡಿಸುತ್ತಾರಾ ಎಂದು ಕಾದು ನೋಡಬೇಕಿದೆ.
ಕಳೆದ 16 ವರ್ಷಗಳಿಂದ ಆರ್‌ಸಿಬಿ ಪುರುಷರ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಮಹಿಳೆಯರ ಆರ್‌ಸಿಬಿ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿ, ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸಿತು.