Select Your Language

Notifications

webdunia
webdunia
webdunia
webdunia

ಕಿಂಗ್‌ ಕೊಹ್ಲಿ ಮಿಂಚು: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ ರೋಚಕ ಜಯ

RCB

Sampriya

ಬೆಂಗಳೂರು , ಸೋಮವಾರ, 25 ಮಾರ್ಚ್ 2024 (23:28 IST)
Photo Courtesy X
ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 17ನೇ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ತವರಿನಲ್ಲಿ ಸೋಮವಾರ ನಡೆದ ಮೊದಲ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ.

ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಆರ್‌ಸಿಬಿ ತಂಡವು ಪಂಜಾಬ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ನಾಯಕ ಶಿಖರ್‌ ಧವನ್‌ ಅವರ ಬ್ಯಾಟಿಂಗ್‌ ಬಲದಿಂದ ಪಂಜಾಬ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗೆ 176 ರನ್‌ ಗಳಿಸಿತು.

ಸವಾಲಿನ ರನ್‌ ಬೆನ್ನತ್ತಿದ ಆರ್‌ಸಿಬಿ ತಂಡಕ್ಕೆ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಆಸರೆಯಾದರು. 49 ಎಸೆತಗಳಲ್ಲಿ 77 ರನ್‌ ಸಿಡಿಸಿದ ಕೊಹ್ಲಿ ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದರು. ಹೀಗಾಗಿ, ಬೆಂಗಳೂರು ತಂಡವು 19.2 ಓವರ್‌ಗಳಲ್ಲಿ 6 ವಿಕೆಟ್‌ಗೆ 178 ರನ್‌ ಗಳಿಸಿ ಗೆಲುವು ಸಾಧಿಸಿತು.

ಈ ಬಾರಿಯ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಮುಗ್ಗರಿಸಿತ್ತು. ಆದರೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ತವರಿನ ಪ್ರೇಕ್ಷಕರ ಎದುರು ಗೆದ್ದು ಬೀಗಿತು. ಕೊಹ್ಲಿ ಅಭಿಮಾನಿಗಳಿಗೆ ಸಿಕ್ಸರ್‌ ಮತ್ತು ಬೌಂಡರಿಗಳಿಂದ ರಂಜಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್: ಪಂಜಾಬ್ ವಿರುದ್ಧ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಗೊಂಡ ಆರ್‌ಸಿಬಿ