Webdunia - Bharat's app for daily news and videos

Install App

ಕಿಂಗ್‌ ಕೊಹ್ಲಿ ಮಿಂಚು: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ ರೋಚಕ ಜಯ

Sampriya
ಸೋಮವಾರ, 25 ಮಾರ್ಚ್ 2024 (23:28 IST)
Photo Courtesy X
ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 17ನೇ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ತವರಿನಲ್ಲಿ ಸೋಮವಾರ ನಡೆದ ಮೊದಲ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ.

ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಆರ್‌ಸಿಬಿ ತಂಡವು ಪಂಜಾಬ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ನಾಯಕ ಶಿಖರ್‌ ಧವನ್‌ ಅವರ ಬ್ಯಾಟಿಂಗ್‌ ಬಲದಿಂದ ಪಂಜಾಬ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗೆ 176 ರನ್‌ ಗಳಿಸಿತು.

ಸವಾಲಿನ ರನ್‌ ಬೆನ್ನತ್ತಿದ ಆರ್‌ಸಿಬಿ ತಂಡಕ್ಕೆ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಆಸರೆಯಾದರು. 49 ಎಸೆತಗಳಲ್ಲಿ 77 ರನ್‌ ಸಿಡಿಸಿದ ಕೊಹ್ಲಿ ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದರು. ಹೀಗಾಗಿ, ಬೆಂಗಳೂರು ತಂಡವು 19.2 ಓವರ್‌ಗಳಲ್ಲಿ 6 ವಿಕೆಟ್‌ಗೆ 178 ರನ್‌ ಗಳಿಸಿ ಗೆಲುವು ಸಾಧಿಸಿತು.

ಈ ಬಾರಿಯ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಮುಗ್ಗರಿಸಿತ್ತು. ಆದರೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ತವರಿನ ಪ್ರೇಕ್ಷಕರ ಎದುರು ಗೆದ್ದು ಬೀಗಿತು. ಕೊಹ್ಲಿ ಅಭಿಮಾನಿಗಳಿಗೆ ಸಿಕ್ಸರ್‌ ಮತ್ತು ಬೌಂಡರಿಗಳಿಂದ ರಂಜಿಸಿದರು.<>

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments