ಕಿಂಗ್ಸ್ ಇಲೆವನ್ ಪಂಜಾಬ್ ಸತತ ಸೋಲಿನ ಸುಳಿಯನ್ನು ಅನುಭವಿಸಿ ಪಾಯಿಂಟ್ ಪಟ್ಟಿಯಲ್ಲಿ ಕೆಳಗಿನ ಎರಡನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಪ್ರವೇಶಿಸುವ ಅವಕಾಶದಿಂದ ಹೊರಬಿದ್ದಿದೆ.
ಕಿಂಗ್ಸ್ ಇಲೆವನ್ ಪಂಜಾಬ್( ಪಾಯಿಂಟ್ 8, ನೆಟ್ ರನ್ ರೇಟ್-0.371)
ಉಳಿದಿರುವ ಪಂದ್ಯಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ, ಬೆಂಗಳೂರು, 18 ಮೇ 2016
ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ, ವಿಜಾಗ್‌ನಲ್ಲಿ 21 ಮೇ 2016
ಕಿಂಗ್ಸ್ ಇಲೆವನ್ ಪಂಜಾಬ್ ಮುಂಬೈ ಇಂಡಿಯನ್ಸ್ ವಿರುದ್ಧ ಜಯಗಳಿಸಿದರೂ ಭಾನುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಪ್ಪಿರುವುದರಿಂದ ಪ್ಲೇ ಆಫ್ ಪ್ರವೇಶಿಸುವ ಕನಸು ಕಮರಿದೆ.
ಅದು ಎರಡು ಪಂದ್ಯಗಳಲ್ಲಿ ಗೆದ್ದರೆ, ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರುವ ಅವಕಾಶ ಲಭ್ಯವಾಗುತ್ತದೆ. ಸತತ ಸೋಲುಗಳನ್ನು ಕಾಣುತ್ತಿರುವ ಕಿಂಗ್ಸ್ ಇಲೆವನ್ ಬ್ಯಾಟಿಂಗ್ ಮತ್ತು ಬೌಲಿಂಗ್ ದೌರ್ಬಲ್ಯಗಳಿಂದ ತತ್ತರಿಸಿದೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.