Webdunia - Bharat's app for daily news and videos

Install App

ಐಪಿಎಲ್‌ನಲ್ಲಿ ಸನ್‌ರೈಸರ್ಸ್‌ ವಿರುದ್ಧ ಗೆಲುವಿನ ಖಾತೆ ತೆರೆಯುತ್ತಾ ಲಖನೌ ಸೂಪರ್‌ ಜೈಂಟ್ಸ್‌

Sampriya
ಗುರುವಾರ, 27 ಮಾರ್ಚ್ 2025 (14:19 IST)
Photo Courtesy X
ಹೈದರಾಬಾದ್: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮತ್ತೊಂದು ಹೈವೋಲ್ಟೇಜ್‌ ಪಂದ್ಯಕ್ಕೆ ಹೈದರಾಬಾದ್‌ ಸಜ್ಜಾಗಿದೆ. ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸಿಡಿಲಬ್ಬರ ಬ್ಯಾಟಿಂಗ್‌ ನಡೆಸಿ ದಾಖಲೆಯ ರನ್‌ ಪೇರಿಸಿದ್ದ ಸನ್‌ರೈಸರ್ಸ್‌ ಇಂದು ಲಖನೌ ಸೂಪರ್‌ ಜೈಂಟ್ಸ್‌ ತಂಡವನ್ನು ಎದುರಿಸಲಿದೆ.

ಕಳೆದ ಆವೃತ್ತಿಯಲ್ಲಿ ಹೈದರಾಬಾದ್‌ ತಂಡವು ಐಪಿಎಲ್‌ನಲ್ಲಿ 287 ರನ್‌ ಪೇರಿಸಿ ಗರಿಷ್ಠ ರನ್‌ ದಾಖಲೆ ನಿರ್ಮಿಸಿತ್ತು. ಈ ಬಾರಿ ರಾಜಸ್ಥಾನ ರಾಯಲ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ 286 ರನ್‌ ಗಳಿಸಿ ತನ್ನದೇ ಹೆಸರಿನಲ್ಲಿದ್ದ ಅತ್ಯಧಿಕ ಮೊತ್ತದ ದಾಖಲೆಯನ್ನು ಕೂದಲೆಳೆಯ ಅಂತರದಲ್ಲಿ ಕಳೆದುಕೊಂಡಿತು. ಆ ಪಂದ್ಯವನ್ನು 44 ರನ್‌ಗಳ ಜಯಭೇರಿ ಬಾರಿಸಿತ್ತು.

ಉಪ್ಪಳದ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಶಾನ್ ಕಿಶನ್ ಹಾಲಿ ಐಪಿಎಲ್‌ನ  ಮೊದಲ ಶತಕ (106, 47ಎ) ಹೊಡೆದರು. ಕಿಶನ್ ಜೊತೆ ಅಭಿಷೇಕ್ ಶರ್ಮಾ, ಟ್ರಾವಿಸ್‌ ಹೆಡ್ ಮತ್ತು ಹೆನ್ರಿಚ್‌ ಕ್ಲಾಸೆನ್ ಅಂಥ ಸ್ಫೋಟಕ ಆಟವಾಡಬಲ್ಲ ಪಡೆ ಆ ತಂಡದಲ್ಲಿದೆ.  ಎರಡನೇ ಪಂದ್ಯದಲ್ಲೂ ಅಬ್ಬರಿಸಿಲು ಆತಿಥೇಯ ತಂಡ ಸನ್ನದ್ಧವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ಎದುರು ರೋಚಕ ಹೋರಾಟದಲ್ಲಿ ಒಂದು ವಿಕೆಟ್‌ನಿಂದ ಸೋತ ಲಖನೌ ತಂಡ ಗೆಲುವಿನ ಖಾತೆ ತೆರೆಯುವ ಛಲದಲ್ಲಿದೆ. ಲಖನೌ ತಂಡದ ನಾಯಕ ಪಂತ್‌ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲರಾದರು. ಕೊನೆಯ ಓವರಿನಲ್ಲಿ ಸ್ಟಂಪಿಂಗ್ ಸಹ ಕೈತಪ್ಪಿದ್ದು ದುಬಾರಿಯಾಯಿತು. ಈ ಬಾರಿ ಲಯಕ್ಕೆ ಮರಳುವ ವಿಶ್ವಾಸವಿದೆ. ಇಂದು ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments