ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳೆದೆರಡು ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದೆ. ಎರಡೂ ಆವೃತ್ತಿಗಳಲ್ಲೂ ಪ್ಲೇಆಫ್ ಪ್ರವೇಶಿಸಲು ವಿಫಲವಾಗಿದೆ. ಇದಕ್ಕೆ ತಂಡದಲ್ಲಿರುವ ದಿಗ್ಗಜ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರು ಕಾರಣ ಬಿಚ್ಚಿಟ್ಟಿದ್ದಾರೆ.
ಕಳೆದೆರಡು ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಳಪೆ ಪ್ರದರ್ಶನ ನೀಡಿದೆ ಎಂದು ಒಪ್ಪಿಕೊಂಡಿರುವ ಧೋನಿ, ಮುಂದಿನ ಆವೃತ್ತಿಯಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಈ ಬಾರಿ ಕಣಕ್ಕಿಳಿಯಲಿದ್ದೇವೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ತಂಡದಲ್ಲಿ ಕೆಲವೊಂದು ನ್ಯೂನತೆಗಳಿವೆ. ಅದನ್ನು ನಿಖರವಾಗಿ ಕಂಡುಹಿಡಿದು ಸರಿಪಡಿಸಬೇಕಿದೆ. ಮುಂದಿನ ಡಿಸೆಂಬರ್‌ನಲ್ಲಿ ನಡೆಯಲಿರುವ ಮಿನಿ ಹರಾಜಿನಲ್ಲಿ ನ್ಯೂನತೆಗಳನ್ನು ಸರಿಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ತಂಡದ ಪರ ಬ್ಯಾಟಿಂಗ್ ನಡೆಸಿದರು.
ಕಳೆದೆರಡು ಆವೃತ್ತಿಗಳಲ್ಲಿ ನಾವು ನಿರೀಕ್ಷಿತ ಯಶಸ್ಸು ಕಂಡಿಲ್ಲ. ಇದರಿಂದ ಪಾಠ ಕಲಿಯುವುದು ಮುಖ್ಯವೆನಿಸುತ್ತದೆ. ಎಲ್ಲಿ ತಪ್ಪಾಯಿತು ಎಂಬುದನ್ನು ಮನಗಂಡು ಸರಿಪಡಿಸಬೇಕಿದೆ. ಮುಂದಿನ ಆವೃತ್ತಿಯಲ್ಲಿ ತಂಡದ ನಾಯಕ ಋತುರಾಜ್ ಗಾಯಕವಾಡ್ ಆಗಮನದಿಂದ ಬ್ಯಾಟಿಂಗ್ ವಿಭಾಗದ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.
ಕಳೆದ ಸಾಲಿನಲ್ಲಿ ಟೂರ್ನಿಯ ಮೊದಲಾರ್ಧದಲ್ಲಿ ಋತುರಾಜ್ ಗಾಯಗೊಂಡ ಪರಿಣಾಮ ಧೋನಿ ತಂಡದ ನಾಯಕತ್ವ ವಹಿಸಿದ್ದರು. 43 ವರ್ಷದ ಧೋನಿ ಅವರು ಐಪಿಎಲ್‌ಗೆ ಇನ್ನೂ ನಿವೃತ್ತಿ ಘೋಷಣೆ ಮಾಡಿಲ್ಲ.