Webdunia - Bharat's app for daily news and videos

Install App

ಕನ್ನಡಿಗರಿಗೆ ಆರ್​ಸಿಬಿ ತಂಡದಲ್ಲೂ ಮೀಸಲಾತಿ ಕಲ್ಪಿಸಿ: ಅಭಿಮಾನಿಗಳ ಒಕ್ಕೊರಲ ಒತ್ತಾಯ

Sampriya
ಶುಕ್ರವಾರ, 19 ಜುಲೈ 2024 (14:20 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆ ಅಂಗೀಕಾರ ಪಡೆಯುತ್ತಿದ್ದಂತೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲೂ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

ಆರ್‌ಸಿಬಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಪ್ರತಿ ಬಾರಿಯೂ ಕನ್ನಡಿಗ ಆಟಗಾರರಿಗೆ ಅವಕಾಶ ನೀಡುವುದಿಲ್ಲ. ಪ್ರತಿ ಬಾರಿ ಹರಾಜು ನಡೆದಾಗಲೂ ಆರ್​ಸಿಬಿ ಅಭಿಮಾನಿಗಳು ಕನ್ನಡಿಗ ಆಟಗಾರರ ಕಡೆಗಣನೆಯ ಬಗ್ಗೆ ಫ್ರಾಂಚೈಸಿ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ.

ಇದೀಗ ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿಗೆ ತರುತ್ತಿರುವ ಬೆನ್ನಲ್ಲೇ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿಯೂ ಶೇ 50ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ. ಆರ್​ಸಿಬಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೀಸಲಾತಿ ಜಾರಿ ಮಾಡುವಂತೆ ಹಲವು ಟ್ವೀಟ್​ ಮಾಡಲಾರಂಭಿಸಿದ್ದಾರೆ.

ಐಪಿಎಲ್​ ಆರಂಭವಾಗಿ 17 ಆವೃತ್ತಿ ಕಳೆದರೂ ಕೂಡ ಆರ್​ಸಿಬಿ ಕಪ್​ ಗೆದ್ದಿಲ್ಲ. ನಮ್ಮ ರಾಜ್ಯದ ಅದೆಷ್ಟೋ ಸ್ಟಾರ್​ ಆಟಗಾರರಿದ್ದರೂ ಕೂಡ ಅವರನ್ನು ಆರ್​ಸಿಬಿ ಖರೀದಿ ಮಾಡದೆ ಸರಿಯಾಗಿ ಆಡಲು ಬಾರದ ಆಟಗಾರರಿಗೆ ಅತ್ಯಧಿಕ ಮೊತ್ತದ ಬಿಡ್​ ಮಾಡಿ ತಂಡ ಸೇರಿಸಿಕೊಳ್ಳುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಾದರು ಕನ್ನಡಿಗ ಆಟಗಾರರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಹೆಚ್ಚುತ್ತಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments