Webdunia - Bharat's app for daily news and videos

Install App

ಐಪಿಎಲ್ ಕ್ರಿಕೆಟ್‌ ಹಬ್ಬಕ್ಕೆ ಮುಹೂರ್ತ ಫಿಕ್ಸ್‌: ಮಾರ್ಚ್‌ 22ರಂದೇ ಆರಂಭ, ಮೇ 25ಕ್ಕೆ ಫೈನಲ್‌ ಕದನ

Sampriya
ಭಾನುವಾರ, 16 ಫೆಬ್ರವರಿ 2025 (11:07 IST)
Photo Courtesy X
ಬೆಂಗಳೂರು: ಬಹುನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಐಪಿಎಲ್‌ 18ನೇ ಆವೃತ್ತಿಯು ಮಾರ್ಚ್‌ 22ರಿಂದ ಆರಂಭಗೊಂಡು ಎರಡು ತಿಂಗಳುಗಳ ಕಾಲ ಕ್ರಿಕೆಟ್‌ ಪ್ರಿಯರಿಗೆ ಭರಪೂರ ಮನರಂಜನೆ ನೀಡಲಿದೆ.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು ಇನ್ನೂ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಿಲ್ಲ. ಆದರೆ, ಮೂಲಗಳ ಪ್ರಕರಣ ಮುಂದಿನ ತಿಂಗಳಿಂದ ಐಪಿಎಲ್ 2025 ಆರಂಭವಾಗಲಿದ್ದು, ಮೇ ತಿಂಗಳಾಂತ್ಯದಲ್ಲಿ ಫೈನಲ್ ಪಂದ್ಯ ಜರುಗಲಿದೆ. ಈ ಬಾರಿ ಉದ್ಘಾಟನಾ ಮತ್ತು ಫೈನಲ್ ಪಂದ್ಯಗಳನ್ನು ಕೋಲ್ಕತ್ತದ ಈಡನ್ ಗಾರ್ಡನ್‌ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತದೆ.

ಮಾರ್ಚ್ 22 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಕಳೆದ ಬಾರಿಯ ರನ್ನರ್ ಅಪ್ ಸನ್​ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯವನ್ನು ತವರಿನಲ್ಲಿ ಆಡಲು ನಿರ್ಧರಿಸಿದೆ.

ಅದರಂತೆ ಮಾರ್ಚ್ 23 ರಂದು ಉಪ್ಪಲ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್​ರೈಸರ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಟೂರ್ನಿಯು​ 10 ನಿಯಮಿತ ಕೇಂದ್ರಗಳಾದ ಅಹಮದಾಬಾದ್, ಮುಂಬೈ, ಚೆನ್ನೈ, ಬೆಂಗಳೂರು, ಲಕ್ನೋ, ಮುಲ್ಲನ್‌ಪುರ, ದೆಹಲಿ, ಕೊಲ್ಕತ್ತಾ, ಹೈದರಾಬಾದ್ ಮತ್ತು ಜೈಪುರದಲ್ಲಿ ನಡೆಯಲಿದೆ. ಇದರ ಜೊತೆಗೆ ಗುವಾಹಟಿ ಮತ್ತು ಧರ್ಮಶಾಲಾದಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.  ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್‌ಗೆ ಮತ್ತು ಗುವಾಹಟಿಯು ರಾಜಸ್ಥಾನ್ ರಾಯಲ್ಸ್‌ಗೆ ಎರಡನೇ ತವರಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments