Webdunia - Bharat's app for daily news and videos

Install App

ಐಪಿಎಲ್‌ಗೆ ಬರುತ್ತಿದ್ದಂತೆ ಪಾಂಡ್ಯ ಮತ್ತೆ ಎಡವಟ್ಟು: ಮುಂಬೈ ನಾಯಕನಿಗೆ ₹10 ಲಕ್ಷ ದಂಡ

Sampriya
ಭಾನುವಾರ, 30 ಮಾರ್ಚ್ 2025 (13:48 IST)
Photo Courtesy X
ಮುಂಬೈ: ಐಪಿಎಲ್‌ನ ಈ ಆವೃತ್ತಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಎರಡನೇ ಪಂದ್ಯದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಹೀಗಾಗಿ, ಭಾರೀ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ನಿಯಮದ ಪ್ರಕಾರ ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ತಂಡದ ನಾಯಕನಿಗೆ ದಂಡದ ಶಿಕ್ಷೆ ನೀಡಲಾಗುತ್ತದೆ. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ಶನಿವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ  ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ನಿಧಾನಗತಿಯಲ್ಲಿ ಓವರ್‌ ಮಾಡಿದ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ₹ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ, ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ. ಗುಜರಾತ್‌ ವಿರುದ್ಧದ ಪಂದ್ಯವನ್ನು ಮುಂಬೈ ತಂಡವು 36 ರನ್‌ಗಳಿಂದ ಸೋತಿತ್ತು.

ಇದಕ್ಕೂ ಮುನ್ನ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಕಳೆದ ಸೀಸನ್​​ನಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿದ ಕಾರಣ ನಾಯಕ ಹಾರ್ದಿಕ್ ಪಾಂಡ್ಯಗೆ ₹ 30 ಲಕ್ಷ ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಆಂಗ್ಲರ ನಾಡಲ್ಲಿ ಶುಭ್ಮನ್ ಗಿಲ್ ಡಬಲ್ ಸೆಂಚುರಿ, ಹಲವು ದಾಖಲೆಗಳು ಉಡೀಸ್‌

IND vs ENG: ವಿರಾಟ್ ದಾಖಲೆ ಮುರಿದ ಶುಭ್ಮನ್‌ ಗಿಲ್‌

IND vs ENG: ಶತಕ ಪೂರೈಸಲಾಗದೇ ನಿರಾಸೆ ಅನುಭವಿಸಿದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments