Select Your Language

Notifications

webdunia
webdunia
webdunia
webdunia

ಐಪಿಎಲ್‌ಗೆ ಬರುತ್ತಿದ್ದಂತೆ ಪಾಂಡ್ಯ ಮತ್ತೆ ಎಡವಟ್ಟು: ಮುಂಬೈ ನಾಯಕನಿಗೆ ₹10 ಲಕ್ಷ ದಂಡ

Mumbai Indians Captain Hardik Pandya, Indian Premier League, Gujarat Titans

Sampriya

ಮುಂಬೈ , ಭಾನುವಾರ, 30 ಮಾರ್ಚ್ 2025 (13:48 IST)
Photo Courtesy X
ಮುಂಬೈ: ಐಪಿಎಲ್‌ನ ಈ ಆವೃತ್ತಿಯ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಎರಡನೇ ಪಂದ್ಯದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಹೀಗಾಗಿ, ಭಾರೀ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ನಿಯಮದ ಪ್ರಕಾರ ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ತಂಡದ ನಾಯಕನಿಗೆ ದಂಡದ ಶಿಕ್ಷೆ ನೀಡಲಾಗುತ್ತದೆ. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ಶನಿವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ  ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ನಿಧಾನಗತಿಯಲ್ಲಿ ಓವರ್‌ ಮಾಡಿದ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ₹ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ, ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ. ಗುಜರಾತ್‌ ವಿರುದ್ಧದ ಪಂದ್ಯವನ್ನು ಮುಂಬೈ ತಂಡವು 36 ರನ್‌ಗಳಿಂದ ಸೋತಿತ್ತು.

ಇದಕ್ಕೂ ಮುನ್ನ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಕಳೆದ ಸೀಸನ್​​ನಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿದ ಕಾರಣ ನಾಯಕ ಹಾರ್ದಿಕ್ ಪಾಂಡ್ಯಗೆ ₹ 30 ಲಕ್ಷ ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಕಣ್ಣಲ್ಲೇ GT ಬೌಲರ್‌ಗೆ ಕ್ಲಾಸ್ ತೆಗೆದುಕೊಂಡ ಹಾರ್ದಿಕ್ ಪಾಂಡ್ಯ, Video