ಟೈಟನ್ಸ್‌ ವಿರುದ್ಧ ಮುಂಬೈ ಸೋಲುತ್ತಿದ್ದಂತೆ ರೋಹಿತ್‌ಗೆ ಜವಾಬ್ದಾರಿಯ ಪಾಠ ಮಾಡಿದ ಪಾಂಡ್ಯ

Sampriya
ಭಾನುವಾರ, 30 ಮಾರ್ಚ್ 2025 (09:39 IST)
Photo Courtesy X
ಮುಂಬೈ: ಐಪಿಎಲ್‌ನ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಈ ಬಾರಿ ಆವೃತ್ತಿಯಲ್ಲಿ ಸತತ ಎರಡನೇ ಸೋಲು ಕಂಡಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಆರಂಭಿಕ ಪಂದ್ಯದಲ್ಲಿ ಪರಾಭವಗೊಂಡಿದ್ದ ಮುಂಬೈ ತಂಡ, ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧವೂ ಮುಗ್ಗರಿಸಿತು.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 8 ವಿಕೆಟ್‌ಗೆ 196 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಇಂಡಿಯನ್ಸ್ ತಂಡವು 160 ರನ್ ಗಳಿಸಿ ಹೋರಾಟವನ್ನು ಮುಗಿಸಿತು. 36 ರನ್​ಗಳಿಂದ ಹಾರ್ದಿಕ್‌ ಪಾಂಡ್ಯ ಪಡೆ ಸೋಲೊಪ್ಪಿಕೊಂಡಿತು.

ಸತತ ಎರಡು ಪಂದ್ಯಗಳಲ್ಲಿ ಮುಂಬೈ ತಂಡ ಸೋಲುತ್ತಿದ್ದಂತೆ ತಂಡದ ಆಟಗಾರರಿಗೆ ನಾಯಕ ಹಾರ್ದಿಕ್‌ ಪಾಂಡ್ಯ ಜವಾಬ್ದಾರಿಯ ಪಾಠ ಮಾಡಿದ್ದಾರೆ. ಈ ಪಂದ್ಯದ ಸೋಲಿಗೆ ಬ್ಯಾಟರ್​ಗಳು ಕಾರಣ ಎಂದು ನೇರವಾಗಿ ಹೇಳಿದ ಅವರು, ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ನಾವು ಮೈದಾನದಲ್ಲಿ ವೃತ್ತಿಪರರಾಗಿ ಕಾಣಿಸಿಕೊಂಡಿಲ್ಲ. ಹಲವು ಸಾಮಾನ್ಯ ತಪ್ಪುಗಳನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

 ಇದೇ ವೇಳೆ ಟೈಟಾನ್ಸ್ ಆರಂಭಿಕರನ್ನು ಹೊಗಳಿದ ಹಾರ್ದಿಕ್ ಪಾಂಡ್ಯ, ಅವರ ಓಪನರ್​ಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಪವರ್​ಪ್ಲೇನಲ್ಲೂ ಉತ್ತಮ ರನ್ ಕಲೆಹಾಕಿದರು. ಆದರೆ ನಮ್ಮ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಇದೀಗ ನಾವೆಲ್ಲರೂ ಜವಾಬ್ದಾರಿ ತೆಗೆದುಕೊಳ್ಳಬೇಕು. ಅದರಲ್ಲೂ ಬ್ಯಾಟರ್​ಗಳು ಹೆಚ್ಚಿನ ಜವಾಬ್ದಾರಿಯೊಂದಿಗೆ ಆಡಬೇಕಿದೆ. ಆರಂಭಿಕರು ಹೆಚ್ಚು ಜಾಗೃತೆಯಿಂದ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ ಎಂದು ಪಾಂಡ್ಯ ಪರೋಕ್ಷವಾಗಿ ರೋಹಿತ್‌ಗೆ ಹೇಳಿದ್ದಾರೆ.

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಖಾತೆ ತೆರೆಯುವ ಮುನ್ನ ಪೆವಿಲಿಯನ್‌ ಸೇರಿದ್ದ ಮುಂಬೈ ತಂಡದ ಆರಂಭಿಕ ರೋಹಿತ್ ಶರ್ಮಾ ಅವರು ಟೈಟನ್ಸ್‌ ವಿರುದ್ಧ ಕೇವಲ 8 ರನ್‌ ಗಳಿಸಿ ಮೊದಲ ಓವರ್‌ನಲ್ಲೇ ವಿಕೆಟ್‌ ಒಪ್ಪಿಸಿ ಟೀಕೆಗೆ ಗುರಿಯಾಗಿದ್ದಾರೆ.

ಸೋಮವಾರ ತಮ್ಮ ತವರು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ತಂಡವು ಹಾಲಿ ಚಾಂಪಿಯನ್‌ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments