ಚಂಡೀಗಢ: ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದುಕೊಂಡು ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಶನಿವಾರದ ಎರಡನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಚಂಡೀಗಢದ ಮುಲ್ಲನಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ದಿನದ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಟಾಸ್ ಗೆದ್ದು, ರಾಜಸ್ಥಾನ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ಅಯ್ಯರ್ ಸಾರಥ್ಯದ ಪಂಜಾಬ್ ಕಿಂಗ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಎರಡು ಸೋಲಿನೊಂದಿಗೆ ಎರಡು ಅಂಕ ಮಾತ್ರ ಗಳಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ಈ ಪಂದ್ಯದಿಂದ ರಾಜಸ್ಥಾನ ತಂಡದ ನಾಯಕತ್ವದ ಜವಾಬ್ದಾರಿ ವಹಿಸುತ್ತಿದ್ದಾರೆ. ಆ ಮೂಲಕ ತಂಡವು ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದೆ. ಈ ಹಿಂದಿನ ಪಂದ್ಯದಲ್ಲಿ ರಿಯಾನ್ ಪರಾಗಿ ತಂಡವನ್ನು ಮುನ್ನಡೆಸಿದ್ದರು.