ಚೆನ್ನೈ: ರಚಿನ್ ರವಿಂದ್ರ ಅವರ ಅಜೇಯ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಮಣಿಸಿ ಶುಭಾರಂಭ ಮಾಡಿತು.
ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮುಂಬೈ ಇಂಡಿಯನ್ಸ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 155 ರನ್ ಗಳಿಸಿತು.
ಈ ಗುರಿ ಬೆನ್ನಟ್ಟಿದ ಚೆನ್ನೈ, ನಾಯಕ ಋತುರಾಜ್ ಗಾಯಕ್‌ವಾಡ್ (53) ಹಾಗೂ ರಚಿನ್ ರವೀಂದ್ರ (65*) ಆಕರ್ಷಕ ಅರ್ಧಶತಕಗಳ ನೆರವಿನಿಂದ ಐದು ಎಸೆತಗಳು ಬಾಕಿ ಇರುವಂತೆಯೇ ಆರು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಜಯಭೇರಿ ಬಾರಿಸಿತು.
ಭಾರತದ ಎಡಗೈ ವೇಗಿ ಖಲೀಲ್ ಅಹಮದ್ ಮತ್ತು ಅಫ್ಗಾನಿಸ್ತಾನದ ಎಡಗೈ ಸ್ಪಿನ್ನರ್ ನೂರ್ ಅಹಮದ್ ಅವರಿಬ್ಬರ ಬೌಲಿಂಗ್ ಮುಂದೆ ಮುಂಬೈ ಇಂಡಿಯನ್ಸ್ ತಂಡವು ಸಾಧಾರಣ ಮೊತ್ತ ಗಳಿಸಿತು. ಹಿಟ್‌ಮ್ಯಾನ್ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರು.