Webdunia - Bharat's app for daily news and videos

Install App

ರಚಿನ್ ರವೀಂದ್ರ ಆಕರ್ಷಕ ಅರ್ಧಶತಕ: ಮುಂಬೈ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಜಯ

Sampriya
ಭಾನುವಾರ, 23 ಮಾರ್ಚ್ 2025 (23:24 IST)
Photo Courtesy X
ಚೆನ್ನೈ: ರಚಿನ್‌ ರವಿಂದ್ರ ಅವರ ಅಜೇಯ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಮಣಿಸಿ ಶುಭಾರಂಭ ಮಾಡಿತು.

ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮುಂಬೈ ಇಂಡಿಯನ್ಸ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 155 ರನ್ ಗಳಿಸಿತು.

ಈ ಗುರಿ ಬೆನ್ನಟ್ಟಿದ ಚೆನ್ನೈ, ನಾಯಕ ಋತುರಾಜ್ ಗಾಯಕ್‌ವಾಡ್ (53) ಹಾಗೂ ರಚಿನ್ ರವೀಂದ್ರ (65*) ಆಕರ್ಷಕ ಅರ್ಧಶತಕಗಳ ನೆರವಿನಿಂದ  ಐದು ಎಸೆತಗಳು ಬಾಕಿ ಇರುವಂತೆಯೇ ಆರು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಜಯಭೇರಿ ಬಾರಿಸಿತು.

ಭಾರತದ ಎಡಗೈ ವೇಗಿ ಖಲೀಲ್ ಅಹಮದ್ ಮತ್ತು ಅಫ್ಗಾನಿಸ್ತಾನದ ಎಡಗೈ ಸ್ಪಿನ್ನರ್ ನೂರ್ ಅಹಮದ್ ಅವರಿಬ್ಬರ ಬೌಲಿಂಗ್ ಮುಂದೆ ಮುಂಬೈ ಇಂಡಿಯನ್ಸ್ ತಂಡವು ಸಾಧಾರಣ ಮೊತ್ತ ಗಳಿಸಿತು. ಹಿಟ್‌ಮ್ಯಾನ್ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments