Publish Date: Wed, 30 Mar 2022 (08:39 IST)
Updated Date: Wed, 30 Mar 2022 (08:41 IST)
ಮುಂಬೈ: ಐಪಿಎಲ್ 2022 ರಲ್ಲಿ ಮೊದಲ ಬಾರಿಗೆ ತಂಡವೊಂದು ಮೊದಲು ಬ್ಯಾಟಿಂಗ್ ಮಾಡಿಯೂ ಗೆಲುವು ಕಂಡ ದಾಖಲೆ ರಾಜಸ್ಥಾನ್ ರಾಯಲ್ಸ್ ಪಾಲಾಯಿತು. ನಿನ್ನೆ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ರಾಜಸ್ಥಾನ್ 61 ರನ್ ಗಳಿಂದ ಗೆದ್ದುಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 210 ರನ್ ಗಳ ಬೃಹತ್ ಮೊತ್ತ ಪೇರಿಸಿತು. ನಾಯಕ ಸಂಜು ಸ್ಯಾಮ್ಸನ್ 55, ಜೋಸ್ ಬಟ್ಲರ್ 35, ದೇವದತ್ತ್ ಪಡಿಕ್ಕಲ್ 41, ಹೆಟ್ಮೈರ್ 32 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ ಆರಂಭದಲ್ಲೇ ನಾಯಕ ಕೇನ್ ವಿಲಿಯಮ್ಸನ್ ವಿಕೆಟ್ ಕಳೆದುಕೊಂಡು ಆಘಾತಕ್ಕೀಡಾಯಿತು. ಸತತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಹೈದರಾಬಾದ್ ಗೆ ಕೆಳ ಕ್ರಮಾಂಕದಲ್ಲಿ ಆಡನ್ ಮಾರ್ಕರಮ್ ಅಜೇಯ 57, ವಾಷಿಂಗ್ಟನ್ ಸುಂದರ್ 40, ರೋಮಾರಿಯೋ ಶೆಫರ್ಡ್ 24 ರನ್ ಗಳಿಸಿ ಚೇತರಿಕೆ ನೀಡಿದರು. ಆದರೆ ಹೈದರಾಬಾದ್ ಅಂತಿಮವಾಗಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಶಕ್ತವಾಯಿತು. ರಾಜಸ್ಥಾನ್ ಪರ ಯಜುವೇಂದ್ರ ಚಾಹಲ್ 3, ಪ್ರಸಿದ್ಧ ಕೃಷ್ಣ, ಟ್ರೆಂಟ್ ಬೌಲ್ಟ್ ತಲಾ 2 ವಿಕೆಟ್ ಕಬಳಿಸಿದರು.