Publish Date: Tue, 19 Apr 2022 (07:20 IST)
Updated Date: Tue, 19 Apr 2022 (07:30 IST)
ಮುಂಬೈ: ಐಪಿಎಲ್ 2022 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ 7 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಬರೋಬ್ಬರಿ 217 ರನ್ ಗಳಿಸಿತು. ಜೋಸ್ ಬಟ್ಲರ್ 103 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದರು. ನಾಯಕ ಸಂಜು ಸ್ಯಾಮ್ಸನ್ 38 ರನ್ ಗಳ ಕೊಡುಗೆ ನೀಡಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ ಉತ್ತಮ ರೀತಿಯಲ್ಲಿ ಬ್ಯಾಟಿಂಗ್ ಮಾಡಿತು. ನಾಯಕ ಶ್ರೇಯಸ್ ಅಯ್ಯರ್ 85, ಏರಾನ್ ಫಿಂಚ್ 58 ರನ್ ಗಳಿಸಿದರು. ಆದರೆ ಯಜುವೇಂದ್ರ ಚಾಹಲ್ 4 ವಿಕೆಟ್ ಕಬಳಿಸಿ ಎದುರಾಳಿಗಳಿಗೆ ಪೆಟ್ಟು ನೀಡಿದರು. ಕೊನೆಯ ಓವರ್ ನಲ್ಲಿ ಒಬೆಡ್ ಮೆಕೋಯ್ ಎರಡು ವಿಕೆಟ್ ಕಬಳಿಸಿ ತಂಡಕ್ಕೆ ರೋಚಕ ಜಯ ಕೊಡಿಸಿದರು. ಅಂತಿಮವಾಗಿ ಕೆಕೆಆರ್ 19.4 ಓವರ್ ಗಳಲ್ಲಿ 210 ರನ್ ಗಳಿಗೆ ಆಲೌಟ್ ಆಯಿತು.