Webdunia - Bharat's app for daily news and videos

Install App

ಮತ್ತೆ ನೋಟ್‌ಬುಕ್‌ ಸೆಲೆಬ್ರೇಷನ್‌ ಮಾಡಿದ ರಾಠಿಗೆ ಬಿತ್ತು ಭಾರೀ ದಂಡ: ರಿಷಭ್ ಪಂತ್‌ಗೂ ₹12 ಲಕ್ಷ ಫೈನ್‌

Sampriya
ಶನಿವಾರ, 5 ಏಪ್ರಿಲ್ 2025 (13:35 IST)
Photo Courtesy X
ಲಖನೌ: ಲಖನೌ ಸೂಪರ್‌ ಜೈಂಟ್ಸ್‌ ತಂಡದ ಬೌಲರ್‌ ದಿಗ್ವೇಶ್ ರಾಠಿ ಅವರು ಶುಕ್ರವಾರ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಕಿರಿಕ್‌ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಭಾರೀ ದಂಡ ತೆತ್ತಿದ್ದಾರೆ.

ಮುಂಬೈ ತಂಡದ ನಮನ್ ಧೀರ್ ವಿಕೆಟ್‌ ಪಡೆದ ರಾಠಿ ಅವರು ನೋಟ್‌ಬುಕ್‌ ಸೆಲೆಬ್ರೇಷನ್‌ ಮಾಡಿದ್ದಾರೆ. ಹೀಗಾಗಿ ಸತತ ಎರಡನೇ ಬಾರಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ, ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ. ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದ ವೇಳೆಯೂ ಇದೇ ರೀತಿ ಸಂಭ್ರಮಾಚರಿಸಿ ದಂಡಕ್ಕೆ ಗುರಿಯಾಗಿದ್ದರು.

ಐಪಿಎಲ್‌ನ ಲೆವೆಲ್-1 ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ಹಾಕಲಾಗಿದೆ. ಆದರೆ, ರಾಠಿ ಅವರ ಅಮೋಘ ಬೌಲಿಂಗ್‌ ದಾಳಿಯ ನೆರವಿನಿಂದ ಮುಂಬೈ ವಿರುದ್ಧದ ಪಂದ್ಯದಲ್ಲಿ ಲಖನೌ ತಂಡವು 12 ರ‌ನ್‌ಗಳಿಂದ ಜಯ ಸಾಧಿಸಿತ್ತು. ರಾಠಿ ಒಂದು ವಿಕೆಟ್‌ ಪಡೆಯುವ ಜೊತೆಗೆ ರನ್‌ ನಿಯಂತ್ರಣ ಮಾಡಿದ್ದರು.

ಇದೇ ವೇಳೆ ಲಖನೌ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್‌ಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಬಿಸಿಸಿಐ ₹ 12 ಲಕ್ಷ ದಂಡ ವಿಧಿಸಿದೆ.

ಬೌಲಿಂಗ್ ತಂಡವು 20 ಓವರ್‌ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು. ಆದರೆ ಎಲ್‌ಎಸ್‌ಜಿ ನಿಗದಿತ ಸಮಯಕ್ಕಿಂತ ಒಂದು ಓವರ್ ಹಿಂದಿತ್ತು. ಹೀಗಾಗಿ 19 ನೇ ಓವರ್‌ ಬಳಿಕ ಅವರು 30-ಗಜ ವೃತ್ತದ ಹೊರಗೆ ಒಬ್ಬ ಫೀಲ್ಡರ್ ಅನ್ನು ಕಡಿಮೆ ಇಡಬೇಕಾಯಿತು. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್ ನೀತಿ ಸಂಹಿತೆಯ ಪರಿಚ್ಚೇದ 2.22ರ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ರಿಷಭ್ ಪಂತ್‌ಗೆ ₹12 ಲಕ್ಷ ದಂಡ ವಿಧಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments