Webdunia - Bharat's app for daily news and videos

Install App

IPL 18ನೇ ಸೀಸನ್‌ನಲ್ಲಿ ಆರ್‌ಸಿಬಿ ಟ್ರೋಫಿ ಎತ್ತುವುದು ಪಕ್ಕಾ ಎಂದು ತಂಡದ ಮಾಜಿ ಸ್ಟಾರ್‌ ಆಟಗಾರ

Sampriya
ಬುಧವಾರ, 19 ಮಾರ್ಚ್ 2025 (17:15 IST)
Photo Courtesy X
ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಈ ಬಾರಿ ಸಮತೋಲನದಿಂದ ಕೂಡಿದ್ದು, ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 18ನೇ ಆವೃತ್ತಿಯಲ್ಲಿ ಖಂಡಿತವಾಗಿಯೂ ಟ್ರೋಫಿ ಎತ್ತಲಿದೆ ಎಂದು ತಂಡದ ಮಾಜಿ ಸ್ಟಾರ್‌ ಆಟಗಾರ ಎಬಿಡಿ ವಿಲಿಯರ್ಸ್‌ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಟ್ರೋಫಿ ಗೆಲ್ಲುವುದು ತುಂಬಾ ಕಷ್ಟ.  ವಿಶ್ವಕಪ್ ಗೆಲ್ಲಬಹುದಾದ 10 ವಿಶ್ವ ದರ್ಜೆಯ ತಂಡಗಳಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ  ಎಂದು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಡಿವಿಲಿಯರ್ಸ್ ಜಿಯೋ ಹಾಟ್‌ಸ್ಟಾರ್‌ನಲ್ಲಿ ಹೇಳಿದರು.

ಆರ್‌ಸಿಬಿಯ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ 18ನೇ ಸಂಖ್ಯೆಯ ಜೆರ್ಸಿಯನ್ನು ಧರಿಸಿ ಮುನ್ನಡೆಸುತ್ತಿದ್ದಾರೆ. ಈ ಬಾರಿ ಐಪಿಎಲ್‌ನ 18ನೇ ಸೀಸನ್‌ನಲ್ಲಿ ನಡೆಯುತ್ತಿದೆ. ಹೀಗಾಗಿ ಒಂದಕ್ಕೊಂದು ಸಂಬಂಧವಿದೆ ಎಂದು ಅವರು ಹೇಳಿದ್ದಾರೆ.

ಆರ್‌ಸಿಬಿ ಟ್ರೋಫಿ ಎತ್ತಿ ಹಿಡಿದರೆ, ವಿರಾಟ್ ಜೊತೆ ಆಚರಿಸಲು ನಾನು ಅಲ್ಲಿಗೆ ಬರುತ್ತೇನೆ!. ವಿರಾಟ್‌ ಅವರು ಕ್ರಿಕೆಟ್ ಮೈದಾನದ ಎಲ್ಲಾ ಪ್ರದೇಶಗಳಿಗೂ ಚೆಂಡನ್ನು ಹೊಡೆಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಸಿಬಿ ತಂಡವು ಮಾರ್ಚ್ 22 ರಂದು ನಡೆಯಲಿರುವ ಋತುವಿನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಬಾರಿ ಆರ್‌ಸಿಬಿ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ., ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್  ತಂಡದಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments