Select Your Language

Notifications

webdunia
webdunia
webdunia
webdunia

ಐಪಿಎಲ್ 2022: ಆರ್ ಸಿಬಿ ವಿರುದ್ಧ ಗೆದ್ದ ಗುಜರಾತ್

ಐಪಿಎಲ್ 2022: ಆರ್ ಸಿಬಿ ವಿರುದ್ಧ ಗೆದ್ದ ಗುಜರಾತ್
ಮುಂಬೈ , ಶನಿವಾರ, 30 ಏಪ್ರಿಲ್ 2022 (19:26 IST)
ಮುಂಬೈ: ಐಪಿಎಲ್ 2022 ರ ಇಂದಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುಜರಾತ್ ಟೈಟನ್ಸ್ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಪರ ವಿರಾಟ್ ಕೊಹ್ಲಿ 58 ರನ್ ಗಳಿಸಿ ಮಿಂಚಿದರು. ಇವರಿಗೆ ತಕ್ಕ ಸಾಥ್ ನೀಡಿದ ರಜತ್ ಪಟಿದಾರ್ 52, ಗ್ಲೆನ್ ಮ್ಯಾಕ್ಸ್ ವೆಲ್ 33 ರನ್ ಗಳಿಸಿ ಔಟಾದರು. ಇದರಿಂದಾಗಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು.

ಈ ಮೊತ್ತ ಬೆನ್ನತ್ತಿದ ಗುಜರಾತ್ 19.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸುವ ಮೂಲಕ ಗುರಿ ಮುಟ್ಟಿತು. ವೃದ್ಧಿಮಾನ್ ಸಹಾ 29, ಶುಬ್ನಂ ಗಿಲ್ 31, ರಾಹುಲ್ ತೆವಾತಿಯಾ 43, ಡೇವಿಡ್ ಮಿಲ್ಲರ್ 39 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಟೆನಿಸ್ ದಂತಕತೆ ಬೋರಿಸ್ ಬೇಕರ್ ಗೆ 2.5 ವರ್ಷ ಜೈಲು!