Publish Date: Wed, 27 Apr 2022 (08:10 IST)
Updated Date: Wed, 27 Apr 2022 (08:44 IST)
ಮುಂಬೈ: ಐಪಿಎಲ್ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 29 ರನ್ ಗಳಿಂದ ಸೋತಿದೆ.
ಇದರೊಂದಿಗೆ ರಾಜಸ್ಥಾನ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ರಿಯಾನ್ ಪರಾಗ್ ಅಜೇಯ 56 ರನ್ ಸಿಡಿಸಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿ 19.3 ಓವರ್ ಗಳಲ್ಲಿ 110 ರನ್ ಗಳಿಗೆ ಆಲೌಟ್ ಆಯಿತು. ಫಾರ್ಮ್ ಕಂಡುಕೊಳ್ಳಲು ಹರಸಾಹಸ ಪಡುತ್ತಿರುವ ವಿರಾಟ್ ಕೊಹ್ಲಿ ಆರಂಭಿಕರಾಗಿ ಬಡ್ತಿ ಪಡೆದು ಬಂದರೂ 9 ರನ್ ಗೆ ಔಟಾದರು. ನಾಯಕ ಫಾಡು ಪ್ಲೆಸಿಸ್ 23 ರನ್ ಗಳಿಸಿದರು. ರಾಜಸ್ಥಾನ್ ಪರ ಮಾರಕ ದಾಳಿ ಸಂಘಟಿಸಿದ ಕುಲದೀಪ್ ಸೇನ್ 4, ರವಿಚಂದ್ರನ್ ಅಶ್ವಿನ್ 3, ಪ್ರಸಿದ್ಧ ಕೃಷ್ಣ 2 ವಿಕೆಟ್ ಕಬಳಿಸಿದರು. ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ ಸಿಬಿಗೆ ಸೋಲೇ ಗತಿಯಾಯಿತು.