ಆರ್‌ಸಿಬಿಗೆ ಐಪಿಎಲ್‌ ಕಿರೀಟ: ದೂರದಿಂದಲೇ ಭಾವುಕ ಪೋಸ್ಟ್‌ ಹಂಚಿಕೊಂಡ ಮಾಜಿ ಮಾಲೀಕ ವಿಜಯ್‌ ಮಲ್ಯ

Sampriya
ಬುಧವಾರ, 4 ಜೂನ್ 2025 (14:21 IST)
ಬೆಂಗಳೂರು: 18 ವರ್ಷಗಳ ಕಾಯುವಿಕೆಯ ಬಳಿಕ ಐಪಿಎಲ್‌ ಟ್ರೋಫಿಯನ್ನು ಆರ್‌ಸಿಬಿ ತಂಡವನ್ನು ಗೆದ್ದಿದೆ. ಅಭಿಮಾನಿಗಳ ಸಂಭ್ರಮ ಮೇರೆಮೀರಿದೆ. ಈ ಮಧ್ಯೆ ತಂಡದ ಮಾಜಿ ಮಾಲೀಕ, ಉದ್ಯಮಿ ವಿಜಯ್‌ ಮಲ್ಯ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. 

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ 6 ರನ್‌ಗಳ ಜಯ ಸಾಧಿಸಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಆಗಿದೆ. 

ನಾನು ಆರ್‌ಸಿಬಿಯನ್ನು ಸ್ಥಾಪಿಸಿದಾಗ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದ ಕಿಂಗ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದೆ, ಅವರು 18 ವರ್ಷಗಳ ಕಾಲ ಆರ್‌ಸಿಬಿಯೊಂದಿಗೆ ಇದ್ದು ಚಾಂಪಿಯನ್‌ ಆಗಿದ್ದಾರೆ ಎಂದು ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿರುವ ವಿಜಯ್‌ ಮಲ್ಯ ಬರೆದುಕೊಂಡಿದ್ದಾರೆ. 

ಆರ್‌ಸಿಬಿ ಇತಿಹಾಸದಲ್ಲಿ ಕ್ರಿಸ್ ಗೇಲ್ ಮತ್ತು ಮಿಸ್ಟರ್ 360 ಎಬಿ ಡಿವಿಲಿಯರ್ಸ್ ಅಳಿಸಲಾಗದ ಭಾಗವಾಗಿದ್ದಾರೆ. ಕೊನೆಗೂ ಐಪಿಎಲ್ ಟ್ರೋಫಿ ಬೆಂಗಳೂರಿಗೆ ಆಗಮಿಸುತ್ತಿದೆ. ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು, ಮತ್ತೊಮ್ಮೆ ಧನ್ಯವಾದಗಳು. ಆರ್‌ಸಿಬಿ ಅಭಿಮಾನಿಗಳು ಟ್ರೋಫಿಗೆ ಅರ್ಹರು. ಈ ಸಲ ಕಪ್‌ ಬೆಂಗಳೂರಿಗೆ ಬರುತ್ತೆ ಎಂದು ಬರೆದುಕೊಂಡಿದ್ದಾರೆ. 

ಮತ್ತೊಂದು ಪೋಸ್ಟ್‌ನಲ್ಲಿ, ಆರ್‌ಸಿಬಿ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್‌ ಆಗಿದೆ. 2025ರ ಟೂರ್ನಿ ಅದ್ಭುತವಾಗಿತ್ತು. ಆರ್‌ಸಿಬಿ ಉತ್ತಮ ತರಬೇತಿ ಮತ್ತು ಪ್ರೋತ್ಸಾಹ ಹೊಂದಿರುವ ಸಮತೋಲಿತ ತಂಡವಾಗಿದೆ. ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ.

2008ರಲ್ಲಿ ಐಪಿಎಲ್‌ ಆರಂಭವಾದಾಗ ವಿಜಯ್‌ ಮಲ್ಯ ಅವರು ಆರ್‌ಸಿಬಿಯ ಮೊದಲ ಮಾಲೀಕರಾಗಿದ್ದರು. ವಿರಾಟ್ ಕೊಹ್ಲಿಯನ್ನು ತಂಡಕ್ಕೆ ಆಯ್ಕೆ ಮಾಡಿದ್ದರು. ನಂತರದ ವರ್ಷಗಳಲ್ಲಿ, ಎಬಿ ಡಿವಿಲಿಯರ್ಸ್ ಮತ್ತು ಕ್ರಿಸ್ ಗೇಲ್ ಅವರಂತಹ ಆಟಗಾರರು ಫ್ರಾಂಚೈಸಿ ಪರ ಆಡಿದ್ದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments