Publish Date: Tue, 26 Apr 2022 (08:50 IST)
Updated Date: Tue, 26 Apr 2022 (09:25 IST)
ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಕಳೆದ ಪಂದ್ಯದಲ್ಲಿ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಆರ್ ಸಿಬಿ ಈ ಪಂದ್ಯದಲ್ಲಿ ಕಳೆದ ಪಂದ್ಯದ ಸೋಲಿನ ಕಹಿ ಮರೆತು ಆಡಬೇಕಿದೆ. ಮುಖ್ಯವಾಗಿ ಅನುಭವಿ ಆಟಗಾರ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್ ರಿಂದ ಇನ್ನೂ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ.
ಇತ್ತ ರಾಜಸ್ಥಾನ್ ರಾಯಲ್ಸ್ ಕಳೆದೆರಡು ಪಂದ್ಯಗಳನ್ನು ಸತತವಾಗಿ ಗೆದ್ದು ಆತ್ಮವಿಶ್ವಾಸದಲ್ಲಿದೆ. ಜೋಸ್ ಬಟ್ಲರ್ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಬೌಲಿಂಗ್ ನಲ್ಲೂ ಪ್ರಸಿದ್ಧ ಕೃಷ್ಣ, ಯಜುವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್ ಒಳಗೊಂಡಂತೆ ತಂಡ ಬಲಿಷ್ಠವಾಗಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.